HEALTH TIPS

ಸೀಟ್‌ ಬೆಲ್ಟ್ ನಿಯಮ ಅನುಸರಣೆ ಖಾತ್ರಿಪಡಿಸುವುದು ಕಾನೂನು ಜಾರಿ ಸಂಸ್ಥೆಗಳ ಕರ್ತವ್ಯ

ನವದೆಹಲಿ: 'ಸೀಟ್‌ ಬೆಲ್ಟ್‌ ಧರಿಸುವುದರ ಬಗ್ಗೆ ಕಾನೂನಿನ ಅನುಸರಣೆಯನ್ನು ಖಚಿತಪಡಿಸಿಕೊಳ್ಳುವುದು ಕಾನೂನು ಜಾರಿ ಸಂಸ್ಥೆಗಳ ಕರ್ತವ್ಯ' ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ವಾಹನ ಚಾಲನೆಯಲ್ಲಿರುವಾಗಸೀಟ್‌ ಬೆಲ್ಟ್‌ ಧರಿಸುವುದನ್ನು ಕಡ್ಡಾಯ ಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯಾ ಬಾಗ್ಚಿ ಮತ್ತು ವಿ. ಮೋಹನಾ ಅವರ ಪೀಠವು ವಿಚಾರಣೆ ನಡೆಸಿತು.

ಸೀಟ್‌ ಬೆಲ್ಟ್‌ ಧರಿಸುವುದನ್ನು ಕಡ್ಡಾಯಗೊಳಿಸುವ ಸಾಕಷ್ಟು ನಿಯಮಗಳಿವೆ. ಈ ಬಗ್ಗೆ ಕಾನೂನು ಬಹಳ ಸ್ಪಷ್ಟವಾಗಿದೆ. ಪ್ರಶ್ನೆ ಇರುವುದು ಕಾನೂನು ಅನುಷ್ಠಾನದ ಬಗ್ಗೆ. ದೇಶದ ಪ್ರತಿಯೊಬ್ಬ ನಾಗರಿಕ ಮತ್ತು ಚಾಲಕ ನಿಯಮಗಳನ್ನು ಪಾಲಿಸುತ್ತಾನೆ ಎನ್ನುವುದನ್ನು ನಾವು ಹೇಗೆ ಖಚಿತಪಡಿಸಿಕೊಳ್ಳಬೇಕು' ಎಂದು ಅರ್ಜಿದಾರರನ್ನು ಪ್ರಶ್ನಿಸಿದ ಪೀಠವು, ಈ ಬಗ್ಗೆ ಇರುವ ಸಲಹೆಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವಂತೆ ಸೂಚಿಸಿತು.

ವಾಹನಗಳ ಸೀಟ್‌ ಕವರ್ ಬದಲಿಸುವುದು ಸೇರಿದಂತೆ ಕೆಲವು ಮಾರ್ಪಾಡುಗಳಿಂದ ಹೆಚ್ಚಿನ ವಾಹನಗಳಲ್ಲಿ ಸೀಟ್‌ ಬೆಲ್ಟ್‌ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಸೀಟ್‌ ಬೆಲ್ಟ್‌ ಕಡ್ಡಾಯಗೊಳಿಸುವ ಮೂಲಕ ರಸ್ತೆ ಅಪಘಾತಗಳ ಸಂಖ್ಯೆಯನ್ನು ಮತ್ತು ಜೀವಹಾನಿಯನ್ನು ದೊಡ್ಡ ಪ್ರಮಾಣದಲ್ಲಿ ತಡೆಯಬಹುದು ಎಂದು ಅರ್ಜಿದಾರರು ಮನವಿ ಮಾಡಿದರು.

ಕೇಂದ್ರ ಮೋಟಾರು ವಾಹನಗಳ ನಿಯಮಗಳು 1989ರ ನಿಯಮ 138(3) ಉಲ್ಲೇಖಿಸಿದ ‍ಪೀಠವು, ವಾಹನ ಚಾಲನೆಯಲ್ಲಿರುವ ಚಾಲಕ ಮತ್ತು ಮುಂದಿನ ಸೀಟಿನಲ್ಲಿ ಕುಳಿತಿರುವ ವ್ಯಕ್ತಿ ಮತ್ತು ಮುಂಭಾಗಕ್ಕೆ ಎದುರಾಗಿರುವ ಹಿಂಭಾಗದ ಸೀಟುಗಳಲ್ಲಿ ಕುಳಿತ ಪ್ರಯಾಣಿಕರು ಸಹ ಸೀಟ್‌ ಬೆಲ್ಟ್‌ ಧರಿಸುವುದು ಕಡ್ಡಾಯ ಎಂದು ಹೇಳಿತು.

'ಜನರ ನಿರ್ಲಕ್ಷ್ಯ ಮತ್ತು ಕಾನೂನು ಜಾರಿಯಲ್ಲಿನ ಲೋಪವು ದೇಶದಾದ್ಯಂತ ರಸ್ತೆ ಅಪಘಾತದಲ್ಲಿ ಜೀವ ಹಾನಿ ಮತ್ತು ಗಂಭೀರ ಗಾಯದ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಿದೆ' ಎಂದು ಅರ್ಜಿದಾರರ ಪರ ವಕೀಲರು ಪೀಠದ ಗಮನ ಸೆಳೆದರು.

'ಜನರ ನಿರ್ಲಕ್ಷ್ಯ ಮತ್ತು ಕಾನೂನು ಜಾರಿ ಸಂಸ್ಥೆಗಳು ಕಾನೂನು ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ವಿಫಲವಾಗುವುದು ಬಹುಮುಖ್ಯವಾದ ಕಾನೂನು ನಿರ್ವಹಣೆಯ ಪ್ರಶ್ನೆಯಾಗಿದೆ' ಎಂದು ನ್ಯಾಯಪೀಠ ಹೇಳಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries