HEALTH TIPS

ಚುನಾವಣಾ ಆಯುಕ್ತರ ನಡುವೆ ಭಿನ್ನಮತ: ಜ್ಞಾನೇಶ್‌ ಕುಮಾರ್ ಬೆಂಬಲಕ್ಕೆ ನಿಂತ ಬಿಜೆಪಿ

ನವದೆಹಲಿ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಲ್ಲಿ ಭಿನ್ನಮತ ಸ್ಟೋಟಗೊಂಡ ಬೆನ್ನಲ್ಲೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಬೆಂಬಲಕ್ಕೆ ಬಿಜೆಪಿ ನಿಂತಿದೆ.


ಈ ಕುರಿತು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ, 'ಎಸ್‌ಐಆರ್‌ ಪ್ರಕ್ರಿಯೆಯನ್ನು ಮೂವರು ಚುನಾವಣಾ ಆಯುಕ್ತರು ಸರ್ವಾನುಮತದಿಂದ ಅನುಮೋದಿಸಿದ್ದಾರೆ' ಎಂದು ಹೇಳಿದ್ದಾರೆ. 

'ಎಲ್ಲಾ ಬಗೆಯಲ್ಲಿ ಚರ್ಚಿಸಿದ ನಂತರವೇ ಎಸ್‌ಐಆರ್‌ ಪ್ರಕ್ರಿಯೆಗೆ ಸರ್ವಾನುಮತದಿಂದ ಅನುಮೋದನೆ ನೀಡಲಾಗಿದೆ ಎಂದು ಚುನಾವಣಾ ಆಯೋಗದ ಪ್ರಕಟಣೆಯಲ್ಲಿಯೇ ತಿಳಿಸಲಾಗಿದೆ. ಅಂದರೆ, ಮೂವರು ಚುನಾವಣಾ ಆಯುಕ್ತರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ ಎಂದಾಯಿತು. ಎಲ್ಲರ ನಿಲುವು ಒಂದೇ ಆಗಿತ್ತು' ಎಂದು ತಿಳಿಸಿದ್ದಾರೆ.

ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, '2014ರಲ್ಲಿ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರತಿಪಕ್ಷಗಳು ಚುನಾವಣೆಯಲ್ಲಿ ನಿರಂತರ ಸೋಲನುಭವಿಸುತ್ತಾ ಬಂದಿವೆ. ಜನರಿಂದ ಬೆಂಬಲ ಸಿಗದ ಕಾರಣ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಸಂವಿಧಾನಾತ್ಮಕ ಸಂಸ್ಥೆಗಳ ವಿರುದ್ಧ ಅಪಪ್ರಚಾರ ನಡೆಸುತ್ತಿವೆ. ಚುನಾವಣಾ ಆಯೋಗವನ್ನು ಅವರು ಬಿಟ್ಟಿಲ್ಲ' ಎಂದು ತಿಳಿಸಿದ್ದಾರೆ.

ಮುಂದುವರಿದು, 'ನಾನು ಚುನಾವಣಾ ಆಯೋಗದ ಪರವಾಗಿ ಸುದ್ದಿಗೋಷ್ಠಿ ನಡೆಸುತ್ತಿಲ್ಲ. ಆದರೆ, ಆಯೋಗ ಹೊರಡಿಸಿರುವ ಪ್ರಕಟಣೆಯನ್ನು ಓದಿದ್ದೇನೆ. ಪ್ರತಿಪಕ್ಷಗಳು ಕೂಡ ಅದನ್ನು ಗಮನಿಸಬೇಕು' ಎಂದು ಹೇಳಿದ್ದಾರೆ. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries