ಬದಿಯಡ್ಕ: ಮಾನ್ಯ ಲಕ್ಷ್ಮಿ ಶೆಟ್ಟಿ ಅವರ ನಿವಾಸದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ಭಕ್ತಿ ಹಾಗೂ ಸಂಭ್ರಮದಿಂದ ಜರಗಿತು. ಪೂಜಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ದೇವಿಯ ಅನುಗ್ರಹಕ್ಕೆ ಪಾತ್ರರಾದರು.
ಕಾರ್ಯಕ್ರಮದಲ್ಲಿ ನಿವೃತ್ತ ತಹಶೀಲ್ದಾರ್ ನಾರಾಯಣ ಗೋಸಾಡ, ಬದಿಯಡ್ಕ ಪಂಚಾಯತಿ ಸದಸ್ಯ ಶ್ಯಾಮ್ ಪ್ರಸಾದ್ ಮಾನ್ಯ, ಬ್ಲಾಕ್ ಪಂಚಾಯತಿ ಸದಸ್ಯ ಖಾದರ್ ಕುಂಞÂ, ಕಣ್ಣ ಗುರುಸ್ವಾಮಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ಸದಸ್ಯ ಹರೀಶ್, ತಾರನಾಥ ರೈ ಕಡಾರು, ಸುಗುಣ, ಉದ್ಯಮಿ ಉಷಾ ಅನಿಲ್, ರಿಶಿಕ ರೆಡ್ಡಿ, ಅನುಸೂಯ, ಶಾರದಾ, ವಿನಯ್, ಬಿಂದು ಪ್ರಮೋದ್, ಅಂಜಲಿ ಸುನೀಶ್ ಸಹಿತ ಹಲವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶ್ರೀ ಶಾಸ್ತಾರ ಭಜನಾ ತಂಡದ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಿತು. ಭಕ್ತಿಭಾವದಿಂದ ನಡೆದ ಭಜನಾ ಸೇವೆ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಿತು. ವರಮಹಾಲಕ್ಷ್ಮಿ ಪೂಜೆಗೆ ಆಗಮಿಸಿದ ಮಹಿಳೆಯರಿಗೆ ಅರಿಶಿನ-ಕುಂಕುಮದೊಂದಿಗೆ ತಾಂಬೂಲ ನೀಡಲಾಯಿತು. ಅಲ್ಲದೆ, ಆಗಮಿಸಿದ ಎಲ್ಲಾ ಭಕ್ತಾದಿಗಳಿಗೆ ವಿಶೇಷ ಉಡುಗೊರೆ ನೀಡಲಾಯಿತು.

.jpg)
.jpg)
