ಬದಿಯಡ್ಕ: ಬದಿಯಡ್ಕ ಗ್ರಾಮ ಪಂಚಾಯಿತಿ ಮಾದರಿ ಸಿಡಿಎಸ್‍ನ ಸಾಮಾನ್ಯ ಸಭೆ ವಳಮಲೆ ಇರಾ ಸಭಾ ಭವನದಲ್ಲಿ ಸೋಮವಾರ ಜರಗಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಶಂಕರ ಉದ್ಘಾಟಿಸಿದರು. ಗ್ರಾಮ ಪಂಚಾಯಿತಿ ಕ್ಷೇಮಕಾರ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ರಜನಿ ಸಂದೀಪ್ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಅಜಿತ್ ಕುಮಾರ್, ಆರೋಗ್ಯ ಮತ್ತು ವಿದ್ಯಾಭ್ಯ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷ ಅವಿನಾಶ್ ರೈ, ಜನಪ್ರತಿನಿಧಿಗಳಾದ ಬಾಲಕೃಷ್ಣ ಶೆಟ್ಟಿ, ಹರೀಶ್, ಮಧುಸೂದನ, ಉಷಾ ಹಾಗೂ ಸಿಡಿಎಸ್ ಮತ್ತು ಎಡಿಎಸ್ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕುಟುಂಬಶ್ರೀ ಜಿಲ್ಲಾ ಮಿಶನ್ ಇನ್ ಚಾರ್ಜ್ ಯದುರಾಜ್, ಕುಟುಂಬಶ್ರೀಯ ಯೋಜನೆಗಳು, ಚಟುವಟಿಕೆಗಳು ಮತ್ತು ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ವಿವಿಧ ವಾರ್ಡುಗಳ ಎಡಿಎಸ್‍ನ ಕಾರ್ಯಚಟುವಟಿಕೆಗಳ ವರದಿ ಮಂಡಿಸಲಾಯಿತು. ಸಿಡಿಎಸ್ ಅಧ್ಯಕ್ಷೆ ಸುಲೋಚನ ಪುದುಕೋಳಿ ಸ್ವಾಗತಿಸಿ, ಉಪಾಧ್ಯಕ್ಷೆ ಜಯಂತಿ ವಂದಿಸಿದರು.

.jpg)
