HEALTH TIPS

ಅರೇಬಿಯನ್ ಸಮುದ್ರದಲ್ಲಿ ಪಾಕ್‌ ನೌಕೆಯ ದುಸ್ಸಾಹಸ: ಭಾರತೀಯ ಯುದ್ಧಹಡಗಿಗೆ ಡಿಕ್ಕಿ

ನವದೆಹಲಿ: ಪಾಕಿಸ್ತಾನದ ನೌಕಾಪಡೆಯ ಹಡಗು ಭಾರತದ ಯುದ್ಧಹಡಗಿಗೆ ಡಿಕ್ಕಿ ಹೊಡೆದಿದೆ. ಈ ಘಟನೆಯ ನಂತರ ದೆಹಲಿಯಲ್ಲಿರುವ ಪಾಕಿಸ್ತಾನದ ರಾಯಭಾರಿಗೆ ಭಾರತೀಯ ವಿದೇಶಾಂಗ ಸಚಿವಾಲಯ ಸಮನ್ಸ್ ನೀಡಿದೆ. 


ಮಂಗಳವಾರ ಸಂಜೆ ಉತ್ತರ ಅರೇಬಿಯನ್ ಸಮುದ್ರದ ಅಂತರರಾಷ್ಟ್ರೀಯ ಜಲಪ್ರದೇಶದಲ್ಲಿ ಭಾರತೀಯ ನೌಕಾಪಡೆಯ ಹಡಗು ಗಸ್ತು ಕಾರ್ಯಾಚರಣೆಯಲ್ಲಿದ್ದಾಗ ಈ ಘಟನೆ ನಡೆದಿದೆ.

ಈ ಘಟನೆಯಲ್ಲಿ ಭಾಗಿಯಾದ ಪಾಕಿಸ್ತಾನದ ಯುದ್ಧಹಡಗು 'ಪಿಎನ್‌ಎಸ್ ಹುನೈನ್' (PNS Hunain) ಎಂದು ತಿಳಿದುಬಂದಿದೆ.

ಘಟನೆಯಿಂದ ಭಾರತದ ಯುದ್ಧಹಡಗಿಗೆ ಭಾರಿ ಹಾನಿಯಾಗಿಲ್ಲ ಹಾಗೂ ಪ್ರಾಣಾಪಾಯ ಸಂಭವಿಸಿಲ್ಲ.

ಪಾಕಿಸ್ತಾನಿ ನೌಕೆಯ ಈ ವರ್ತನೆಯು 1991ರ ಏಪ್ರಿಲ್‌ನಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಸಹಿಯಾಗಿದ್ದ ಮಿಲಿಟರಿ ಸಮರಾಭ್ಯಾಸ ಮತ್ತು ಚಲನವಲನಗಳ ಕುರಿತ ಒಪ್ಪಂದದ 'ಆರ್ಟಿಕಲ್ 10'ರ ನೇರ ಉಲ್ಲಂಘನೆಯಾಗಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಹೇಳಿದೆ.

ಭವಿಷ್ಯದಲ್ಲಿ ಇಂತಹ ಅಪಾಯಕಾರಿ ಘಟನೆಗಳು ಮರುಕಳಿಸದಂತೆ ತಮ್ಮ ಮಿಲಿಟರಿ ತುಕಡಿಗಳಿಗೆ ಎಚ್ಚರಿಕೆ ನೀಡಬೇಕು ಮತ್ತು ದ್ವಿಪಕ್ಷೀಯ ಒಪ್ಪಂದಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಭಾರತವು ಪಾಕಿಸ್ತಾನಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.  






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries