HEALTH TIPS

ಡ್ರಗ್ಸ್ ಬಗ್ಗೆ ಜಾಗೃತಿ ಮೂಡಿಸಿ, ಮಕ್ಕಳಲ್ಲಿ ಮೊಬೈಲ್ ಗೀಳು ಕಡಿಮೆ ಮಾಡಿ: ಶಿಕ್ಷಕರಿಗೆ ಪ್ರಧಾನಿ ಮೋದಿ ಕರೆ

ನವದೆಹಲಿ:  ತರಗತಿ ಬೋಧನೆಗಿಂತ ಹೆಚ್ಚಿನ ಜವಾಬ್ದಾರಿಗಳನ್ನು ವಹಿಸಿಕೊಳ್ಳುವಂತೆ, ವಿದ್ಯಾರ್ಥಿಗಳಲ್ಲಿನ ಮಾದಕದ್ರವ್ಯ ದುರ್ಬಳಕೆಯ ಬಗ್ಗೆ ಎಚ್ಚರಿಕೆ ವಹಿಸುವಂತೆ ಮತ್ತು ಮಕ್ಕಳ ಅತಿಯಾದ ಸ್ಕ್ರೀನ್ ಸಮಯವನ್ನು ಕಡಿಮೆ ಮಾಡಲು ನೆರವಾಗುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಶಿಕ್ಷಕರಿಗೆ ಕರೆ ನೀಡಿದ್ದಾರೆ. 


ಮೋದಿ ಶುಕ್ರವಾರ ತನ್ನ ನಿವಾಸದಲ್ಲಿ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ 86 ಶಿಕ್ಷಕರೊಂದಿಗೆ ಸಂವಾದ ನಡೆಸುತ್ತಿದ್ದರು. ಈ ಸಂವಾದದ ಸಂದರ್ಭದಲ್ಲಿ ಶಿಕ್ಷಕರು ತಮ್ಮ ತರಗತಿಗಳ ನವೀನ ಬೋಧನಾ ವಿಧಾನಗಳು ಮತ್ತು ಅನುಭವಗಳನ್ನು ಹಂಚಿಕೊಂಡರು.

ಕೇವಲ ಶೈಕ್ಷಣಿಕ ಸಾಧನೆಯ ಮೇಲೆ ಮಾತ್ರ ಕೇಂದ್ರೀಕರಿಸದೆ, ವಿದ್ಯಾರ್ಥಿಗಳ ನಡವಳಿಕೆ ಮತ್ತು ದೈನಂದಿನ ಜೀವನದಲ್ಲಿ ಉಂಟಾಗುವ ಬದಲಾವಣೆಗಳ ಬಗ್ಗೆಯೂ ಗಮನಹರಿಸುವಂತೆ ಮೋದಿ ಶಿಕ್ಷಕರಿಗೆ ಸೂಚಿಸಿದರು. ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ,ಮಕ್ಕಳ ಜೀವನದಲ್ಲಿ ಶಿಕ್ಷಕರ ಪಾತ್ರವು ಹೆಚ್ಚು ಮಹತ್ವದ್ದಾಗುತ್ತಿದೆ ಎಂದು ಅವರು ಹೇಳಿದರು.

ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಗೀಳಿನ ಬಗ್ಗೆ ಕಳವಳ ವ್ಯಕ್ತಪಡಿಸಿದ ಮೋದಿ, ಕ್ರೀಡೆ, ದೈಹಿಕ ಆಟಗಳು ಮತ್ತು ಸೃಜನಶೀಲ ಚಟುವಟಿಕೆಗಳನ್ನು ಪ್ರೋತ್ಸಾಹಿಸುವಂತೆ ಶಿಕ್ಷಕರನ್ನು ಆಗ್ರಹಿಸಿದರು. ಮಕ್ಕಳ ಸ್ಕ್ರೀನ್ ಸಮಯದ ಬಗ್ಗೆ ಹಾಗೂ ಅವರು ತಡರಾತ್ರಿ ವೇಳೆ ಮೊಬೈಲ್ ಫೋನ್‌ಗಳನ್ನು ಬಳಸುತ್ತಿದ್ದಾರೆಯೇ ಎನ್ನುವುದರ ಕುರಿತು ಪೋಷಕರೊಂದಿಗೆ ಮಾತನಾಡುವಂತೆ ಶಿಕ್ಷಕರಿಗೆ ಸೂಚಿಸಿದರು.

ವಿದ್ಯಾರ್ಥಿಗಳಲ್ಲಿ ಮಾದಕದ್ರವ್ಯ ದುರ್ಬಳಕೆಯ ಲಕ್ಷಣಗಳ ಬಗ್ಗೆ ಎಚ್ಚರಿಕೆ ವಹಿಸುವಂತೆಯೂ ಸೂಚಿಸಿದ ಪ್ರಧಾನಿ, ಆರಂಭಿಕ ಹಂತದಲ್ಲೇ ವರ್ತನೆಯಲ್ಲಿ ಬದಲಾವಣೆಗಳನ್ನು ಗುರುತಿಸುವ ಮೂಲಕ ವಿದ್ಯಾರ್ಥಿಗಳು ಈ ಸಮಸ್ಯೆಯಿಂದ ಹೊರಬರಲು ನೆರವಾಗುವಂತೆ ತಿಳಿಸಿದರು.

ಮಕ್ಕಳ ಬಾಲ್ಯವನ್ನು ಸಂರಕ್ಷಿಸಬೇಕು ಮತ್ತು ಅವರ ಸಹಜ ಕುತೂಹಲವನ್ನು ಪೋಷಿಸಬೇಕು ಎಂದು ಶಿಕ್ಷಕರಿಗೆ ತಿಳಿಸಿದ ಮೋದಿ, ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ, ಶ್ರಮದ ಗೌರವದಂತಹ ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸಲು ಮತ್ತು ತರಗತಿಯ ಕಲಿಕೆಯನ್ನು ನೈಜ ಜಗತ್ತಿನ ಕೌಶಲ್ಯಗಳೊಂದಿಗೆ ಜೋಡಿಸಲು ಶಿಕ್ಷಕರು ನೆರವಾಗಬೇಕು ಎಂದು ಹೇಳಿದರು.

ಸಂವಾದದ ಸಮಯದಲ್ಲಿ ಶಿಕ್ಷಕಿಯೋರ್ವರು ಸ್ತನ ಕ್ಯಾನ್ಸರ್ ತಪಾಸಣೆಗೆ ಮಾಡಿಸಿಕೊಳ್ಳುಂತೆ ಮಹಿಳೆಯರನ್ನು ಪ್ರೋತ್ಸಾಹಿಸುವ ಕುರಿತು ಮಾತನಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಮೋದಿ, ಹೆಚ್ಚಿನ ಸಂಖ್ಯೆಯ ಮಹಿಳೆಯರು ಸ್ತನ ಕ್ಯಾನ್ಸರ್ ತಪಾಸಣೆಗೆ ಮುಂದೆ ಬರುತ್ತಿದ್ದು,ಇದಕ್ಕಾಗಿ ಗಿನ್ನೆಸ್ ವಿಶ್ವ ದಾಖಲೆಯನ್ನೂ ಸ್ಥಾಪಿಸುತ್ತಿರುವ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿರುವುದು ತನಗೆ ಖುಷಿಯನ್ನುಂಟು ಮಾಡಿದೆ ಎಂದರು. 








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries