HEALTH TIPS

ಮಣಿಪುರದಲ್ಲಿ ಮತ್ತೆ ಹಿಂಸಾಚಾರ | ಗುಂಡಿನ ದಾಳಿಯಲ್ಲಿ ಇಬ್ಬರು ಗ್ರಾಮಸ್ಥರು ಮೃತ್ಯು

ಇಂಫಾಲ: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯ ಗ್ರಾಮವೊಂದರಲ್ಲಿ ಶಂಕಿತ ಬಂಡುಕೋರರು ನಡೆಸಿದ ಗುಂಡಿ ದಾಳಿಯಲ್ಲಿ ಇಬ್ಬರು ಗ್ರಾಮಸ್ಥರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಕಿ ವೈಚಾಂಗ್ ಉಪ ವಿಭಾಗದ ವ್ಯಾಪ್ತಿಯ ಕುಕಿ ಸಮುದಾಯವರು ವಾಸಿಸುವ 'ಎನ್ ಟೈಖಾಂಗ್' ಗ್ರಾಮದಲ್ಲಿ ಬೆಳಗ್ಗೆ ಸುಮಾರು 9.30ಕ್ಕೆ ಈ ದಾಳಿ ನಡೆದಿದೆ.

ಜಿಲ್ಲಾ ಅಧಿಕಾರಿಯೊಬ್ಬರ ಪ್ರಕಾರ, ಅತ್ಯಾಧುನಿಕ ಆಯುಧಗಳನ್ನು ಹೊಂದಿದ್ದ ಬಂಡುಕೋರರು ಗ್ರಾಮಸ್ಥರ ಮೇಲೆ ವಿವೇಚನಾರಹಿತವಾಗಿ ಗುಂಡು ಹಾರಿಸಿದ್ದಾರೆ. ಅಲ್ಲದೆ, ಹಲವು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ.

ಗುಂಡಿನ ದಾಳಿಯಲ್ಲಿ ಮೃತಪಟ್ಟವರನ್ನು 35 ವರ್ಷದ ಲಮ್ತಿನ್ಥಾಂಗ್ ಮತ್ತು ನೇಚಿನ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 65 ವರ್ಷದ ಗ್ರಾಮಸ್ಥ ಸೈಲುನ್ ಎಂಬವರು ಗುಂಡಿನಿಂದ ಗಾಯಗೊಂಡಿದ್ದಾರೆ.

ಗುಂಡಿನ ದಾಳಿ ಮುಂದುವರಿದಂತೆ ಹಲವು ನಿವಾಸಿಗಳು ತಮ್ಮ ಮನೆಗಳಿಂದ ಓಡಿ ಹೋಗಿ ಹತ್ತಿರದ ಕಾಡುಗಳಲ್ಲಿ ಆಶ್ರಯ ಪಡೆದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎರಡೂ ಸಮುದಾಯಗಳ ಸಶಸ್ತ್ರ ಗುಂಪುಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿವೆ.

ಜಿಲ್ಲೆಯಲ್ಲಿ ಶಂಕಿತ ಬಂಡುಕೋರರು ವಾಹನವೊಂದರ ಮೇಲೆ ಹೊಂಚು ದಾಳಿ ನಡೆಸಿ, ನಾಲ್ವರು ನಾಗರಿಕರನ್ನು ಹತ್ಯೆಗೈದ ಮತ್ತು ಒಬ್ಬರನ್ನು ಗಾಯಗೊಳಿಸಿದ ಕೆಲವು ದಿನಗಳ ನಂತರ ಈ ಘಟನೆ ನಡೆದಿದೆ.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries