HEALTH TIPS

ಮುಜುಂಗಾವಲ್ಲಿ ರಕ್ಷಾಬಂಧನ ಉತ್ಸವ

ಕುಂಬಳೆ: ಮುಜುಂಗಾವು ಶ್ರೀ ಭಾರತಿ ವಿದ್ಯಾಪೀಠದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಸಮಿತಿ ಅಧ್ಯಕ್ಷ ಸುಬ್ರಮಣ್ಯ ಭಟ್ ಬೆಜಪ್ಪೆ ಅಧ್ಯಕ್ಷತೆ ವಹಿಸಿ ರಕ್ಷಾಬಂಧನದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಹಿರಿಯ ಶಿಕ್ಷಕ ಬಾಲಕೃಷ್ಣ ಶರ್ಮ ಅನಂತಪುರ ಅವರು ರಕ್ಷಾಬಂಧನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ವಿದ್ಯಾರ್ಥಿಗಳು ಪರಸ್ಪರ ರಾಖಿ ಕಟ್ಟಿ ರಕ್ಷಾಬಂಧನ ದಿನವನ್ನು ಆಚರಿಸಿದರು.


ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಉದಯಕುಮಾರ್ ಮಾಯಿಪ್ಪಾಡಿ, ಆಡಳಿತ ಸಮಿತಿಯ ಜೊತೆ ಕಾರ್ಯದರ್ಶಿ ಬಾಲಕೃಷ್ಣ ಶರ್ಮ, ಆಡಳಿತ ಸಮಿತಿಯ ಸದಸ್ಯ ಶ್ಯಾಮರಾಜ ದೊಡ್ಡಮಾಣಿ, ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ್ ಭಟ್ ದರ್ಬೆಮಾರ್ಗ ಹಾಗೂ ಸಹ ಮುಖ್ಯ ಶಿಕ್ಷಕಿ ಚಿತ್ರಾ ಸರಸ್ವತಿ ಮತ್ತು ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀದೇವಿ ಕಾರ್ಯಕ್ರಮವನ್ನು ನಿರ್ವಹಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries