ಬದಿಯಡ್ಕ : ಬಿಜೆಪಿ ಕುಂಬ್ಡಾಜೆ ಪಂಚಾಯಿತಿ ಸಮಿತಿಯ ನೇತೃತ್ವದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನಾಚರಣೆಯನ್ನು ಕುಂಬ್ಡಾಜೆ ಗ್ರಾಮದ ಶ್ರೀ ಮಹಿಷಮರ್ಧಿನಿ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಪೂಜೆಯೊಂದಿಗೆ ಆಚರಿಸಲಾಯಿತು.
ಕ್ಷೇತ್ರದ ಪ್ರಧಾನ ಅರ್ಚಕ ರಾಘವೇಂದ್ರ ಚಡಗರ ನೇತೃತ್ವದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು. ಪ್ರಧಾನಿಯವರ ದೀರ್ಘಾಯುಷ್ಯ ಹಾಗೂ ದೇಶದ ಅಭಿವೃದ್ಧಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಕೊಝಿಕ್ಕೋಡು ವಲಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಂ.ಸುಧಾಮ ಗೊಸಾಡ, ಬಿಜೆಪಿ ರಾಜ್ಯ ಕೌನ್ಸಿಲ್ ಸದಸ್ಯ ಹರೀಶ್ ನಾರಂಪಾಡಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹಾಗೂ ಮಂಡಲ ಪ್ರಧಾನ ಕಾರ್ಯದರ್ಶಿ ರವೀಂದ್ರ ರೈ ಗೋಸಾಡ, ಪಂಚಾಯಿತಿ ಸಮಿತಿ ಅಧ್ಯಕ್ಷ ಶಶಿಧರ ತೆಕ್ಕೆಮೂಲೆ, ಪ್ರಧಾನ ಕಾರ್ಯದರ್ಶಿ ಪ್ರಮೋದ್ ಭಂಡಾರಿ ಸಹಿತ ಪಕ್ಷದ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು. ಪೂಜೆಯ ಬಳಿಕ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಸಿಹಿ ತಿಂಡಿ ವಿತರಿಸಲಾಯಿತು.

.jpg)
.jpg)
