HEALTH TIPS

ಚುನಾವಣಾ ಆಯೋಗದ ಮೇಲೆ ಪ್ರಧಾನಿ ಒತ್ತಡ; ನರೇಂದ್ರ ಮೋದಿ ರಾಜೀನಾಮೆಗೆ ಖರ್ಗೆ ಆಗ್ರಹ

ನವದೆಹಲಿ: ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಹುದ್ದೆಯಿಂದ ವಜಾಗೊಳಿಸಬೇಕು ಹಾಗೂ ಚುನಾವಣಾ ಆಯೋಗದ ಮುಖ್ಯಸ್ಥರ ಮೇಲೆ ಒತ್ತಡ ಹೇರಿರುವುದಕ್ಕೆ ನೈತಿಕ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಆಗ್ರಹಿಸಿದ್ದಾರೆ. 


ಇಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯಲ್ಲಿ ಮಾಡಲಾದ ಪ್ರತಿಯೊಂದು ಪ್ರಮುಖ ಬದಲಾವಣೆಯ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕಗೊಳಿಸುವುದು ಮತ್ತು ರಾಜಕೀಯ ಪಕ್ಷಗಳಿಗೆ ಮತದಾರರ ಪಟ್ಟಿ ಹಾಗೂ ಸಂಬಂಧಿತ ಡೇಟಾವನ್ನು ಸರಳ ರೂಪದಲ್ಲಿ, ಸೂಕ್ತ ಸಮಯದಲ್ಲಿ ಒದಗಿಸಬೇಕು ಎಂದು ಖರ್ಗೆ ಒತ್ತಾಯಿಸಿದ್ದಾರೆ.

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಗಂಭೀರ ವ್ಯತ್ಯಾಸಗಳು ಅಥವಾ ಗೊಂದಲಗಳು ಕಂಡುಬಂದಲ್ಲಿ ಕಾಲಮಿತಿಯಲ್ಲಿ ತನಿಖೆ ನಡೆಸಬೇಕೆಂದು ಖರ್ಗೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಪಟ್ಟಿಯಿಂದ ಹೆಸರು ತೆಗೆದುಹಾಕಲಾದ ಮತದಾರರಿಗೆ ಸಂಪೂರ್ಣ ಮಾಹಿತಿ ನೀಡಿ, ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಬೇಕು. ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳು ಹಾಗೂ ಮಾಹಿತಿಯಲ್ಲಿ ಪಾರದರ್ಶಕತೆ ಇರಬೇಕು ಎಂದು ಹೇಳಿದರು.

ನಾವು ಈ ವಿಷಯವನ್ನು ಕೇವಲ ಚುನಾವಣೆಯಲ್ಲಿ ಗೆಲ್ಲುವ ಅಥವಾ ಸೋಲುವ ಹೋರಾಟವಾಗಿ ನೋಡುತ್ತಿಲ್ಲ. ಚುನಾವಣೆಗಳು ಬರುತ್ತವೆ, ಹೋಗುತ್ತವೆ. ಸರ್ಕಾರಗಳು ಬದಲಾಗುತ್ತವೆ. ಆದರೆ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಶಾಶ್ವತ. ಇದು ಭಾರತೀಯ ಪ್ರಜಾಪ್ರಭುತ್ವದ ಅಡಿಪಾಯ. ಪ್ರಜಾಪ್ರಭುತ್ವದಲ್ಲಿ ಅತ್ಯಂತ ಶಕ್ತಿಶಾಲಿ ವ್ಯಕ್ತಿ ಎಂದರೆ ಮತದಾರನೇ ಹೊರತು ಪ್ರಧಾನಿ, ಮುಖ್ಯಮಂತ್ರಿ ಅಥವಾ ಅಧಿಕಾರದಲ್ಲಿರುವ ನಾಯಕರಲ್ಲ ಎಂಬುದನ್ನು ನಾವು ಪ್ರತಿಯೊಬ್ಬ ನಾಗರಿಕನಿಗೂ ಈ ವಿಷಯವನ್ನು ತಿಳಿಸಬೇಕಿದೆ ಎಂದರು.

ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಜೈರಾಮ್ ರಮೇಶ್, ಕೆ.ಸಿ. ವೇಣುಗೋಪಾಲ್, ಸಚಿನ್ ಪೈಲಟ್, ಮುಕುಲ್ ವಾಸ್ನಿಕ್ ಹಾಗೂ ಹಿರಿಯ ನಾಯಕ ಪಿ. ಚಿದಂಬರಂ ಸೇರಿದಂತೆ ಹಲವರು ಭಾಗವಹಿಸಿದ್ದರು. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ (ಕರ್ನಾಟಕ), ಸತೀಶನ್ (ಕೇರಳ), ರೇವಂತ್ ರೆಡ್ಡಿ (ತೆಲಂಗಾಣ) ಮತ್ತು ಹಿಮಾಚಲ ಪ್ರದೇಶದ ಸಿಎಂ ಭಾಗವಹಿಸಿದ್ದರು. 






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries