HEALTH TIPS

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಕಳತ್ತೂರು ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

ಕುಂಬಳೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕುಂಬಳೆ ವಲಯ, ಮಂಜೇಶ್ವರ ತಾಲೂಕು ಇದರ ಆಶ್ರಯದಲ್ಲಿ ಕಳತ್ತೂರಿನ ಎ.ಎಸ್.ಬಿ.ಎಸ್. ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.


ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯರು ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆ ಮತ್ತು ಗಿಡ-ಮರಗಳ ಪ್ರಾಮುಖ್ಯತೆಯ ಕುರಿತು ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.

ಈ ಸಂದರ್ಭದಲ್ಲಿ ಮಂಜೇಶ್ವರ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಂಜುನಾಥ ಆಳ್ವ, ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ಆಚಾರ್, ಜನಜಾಗೃತಿ ವಲಯ ಅಧ್ಯಕ್ಷ  ಮಹೇಶ್ ಪುಣಿಯೂರು, ಮೇಲ್ವಿಚಾರಕ ಅಭಿಷೇಕ್, ಕೃಷಿ ಮೇಲ್ವಿಚಾರಕ ಗಿರೀಶ್, ಸೇವಾ ಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು, ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries