ಕಾಸರಗೋಡು: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಆರನೇ ವರ್ಷದ ಚಾತುರ್ಮಾಸ್ಯದ ಸಮಾರೋಪ ಸಮಾರಂಭ ಸೆ. 26ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.
ಕಾರ್ಯಕ್ರಮದ ಅಂಗವಾಗಿ ಸಂಪಾಜೆಯ ಡಾ. ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನದ ಆಯೋಜನೆ ಹಾಗೂ ಪ್ರಾಯೋಜಕತ್ವದಲ್ಲಿ ಅಮೋಘ ಯಕ್ಷಗಾನ ಪ್ರದರ್ಶನ ನಡೆಯಲಿರುವುದು.
ಚಿತ್ರಾಕ್ಷಿ ಕಲ್ಯಾಣ, ಶ್ರೀರಂಗ ತುಲಾಭಾರ ಹಾಗೂ ಗಿರಿಜಾ ಕಲ್ಯಾಣ-ಕುಮಾರ ವಿಜಯ ಯಕ್ಷಗಾನ ಬಯಲಾಟ ಜರುಗಲಿದೆ. ಭಾಗವತರಾಗಿ ಪಟ್ಲ ಸತೀಶ್ ಶೆಟ್ಟಿ, ಸತ್ಯನಾರಾಯಣ ಪುಣಿಂಚಿತ್ತಾಯ, ಗಣೇಶ್ ಕುಮಾರ್ ಹೆಬ್ರಿ(ದ್ವಂದ್ವ), ರವಿಚಂದ್ರ ಕನ್ನಡಿಕಟ್ಟೆ, ಚಿನ್ಮಯ ಭಟ್ ಕಲ್ಲಡ್ಕ, ರಾಮಕೃಷ್ಣ ಮಯ್ಯ ಸಿರಿಬಾಗಿಲು, ಗಿರೀಶ್ ರೈ ಕಕ್ಕೆಪದವು, ಮಹೇಶ್ ಕನ್ಯಾಡಿ ಸಹಕರಿಸುವರು.

