HEALTH TIPS

ಅವಹೇಳನಕಾರಿ ಪೋಸ್ಟ್‌: ದೆಹಲಿ ಪೊಲೀಸರಿಗೆ ಕೋರ್ಟ್ ನೋಟಿಸ್‌

ನವದೆಹಲಿ: ಸಾಮಾಜಿಕ ಜಾಲತಾಣ 'ಎಕ್ಸ್‌'ನಲ್ಲಿ ಅವಹೇಳನಕಾರಿ ಮತ್ತು ಅಸಹ್ಯಕರ ಪೋಸ್ಟ್‌ ಮತ್ತು ವಿಡಿಯೊಗಳನ್ನು ಹಂಚಿಕೊಂಡಿರುವ ಆರೋಪದಡಿ ವಿದ್ಯಾರ್ಥಿ ಹೋರಾಟಗಾರರೊಬ್ಬರು ಮತ್ತು ಅವರ ತಂದೆಯ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರಿ ವಕೀಲರೊಬ್ಬರು ಸಲ್ಲಿಸಿರುವ ಅರ್ಜಿಯ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ದೆಹಲಿಯ ನ್ಯಾಯಾಲಯವೊಂದು ನಗರ ಪೊಲೀಸರಿಗೆ ಬುಧವಾರ ನಿರ್ದೇಶನ ನೀಡಿದೆ. 


ವಕೀಲ ಅಮಿತ ಸಚ್‌ದೇವ ಸಲ್ಲಿಸಿರುವ ಅರ್ಜಿಯ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡುವಂತೆ ಪೊಲೀಸರಿಗೆ ಪ್ರಧಾನ ಮ್ಯಾಜಿಸ್ಟ್ರೇಟ್‌ ನೋಟಿಸ್‌ ಜಾರಿ ಮಾಡಿದ್ದಾರೆ.

'ಆರೋಪಿಗಳಾದ ನಿಶು ಆಜಾದ್‌ ಮತ್ತು ಅವರ ತಂದೆ ಸಂಜಯ್‌ ಆಜಾದ್‌ ಮಾಡಿರುವ ಪೋಸ್ಟ್‌ಗಳು ಸಾರ್ವಜನಿಕರ ಆಕ್ರೋಶಕ್ಕೆ ಕಾರಣ ವಾಗಿದೆ. ಹಿಂದೂ ಧರ್ಮ ಧಾರ್ಮಿಕ ನಂಬಿಕೆಗಳಿಗೆ ಅವಮಾನ ಎಸಗಿದ ಮತ್ತು ಕೋಮು ಸೌಹಾರ್ದಕ್ಕೆ ಧಕ್ಕೆ ತಂದ ಆರೋಪ ಸೇರಿದಂತೆ ಹಲವು ಆರೋಪಗಳ ಕುರಿತು ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬೇಕು' ಎಂದು ಸಚ್‌ದೇವ ಮನವಿ ಮಾಡಿದ್ದಾರೆ.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries