ಕಾಸರಗೋಡು: ಸಣ್ಣ ತಿರುಪತಿ ಎಂದೇ ಪ್ರಸಿದ್ಧಿ ಪಡೆದಿರುವ ಕಾಸರಗೋಡು ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ ಅಕ್ಟೋಬರ್ 11 ರಿಂದ 21ರ ವೆಗೆ ಜರುಗಲಿದೆ. ಕಾರ್ಯಕ್ರಮದ ಆಮಂತ್ರಣಪತ್ರಿಕೆ ಬಿಡುಗಡೆ ಸಮಾರಂಭ ದೇವಸ್ಥಾನದಲ್ಲಿ ಜರುಗಿತು. ಕ್ಷೇತ್ರ ತಂತ್ರಿವರ್ಯ, ದೇವಸ್ಥಾನದ ಮೊಕ್ತೇಸರರು ಆದ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ ಆಮಂತ್ರಣಪತ್ರಿಕೆ ಬಿಡುಗಡೆಗೊಳಿಸಿದರು. ಈ ಸಂದರ್ಭ ಕ್ಷೇತ್ರ ಸಮಿತಿಯ ಪ್ರಮುಖರಾದ ರಾಮ ಕಿಶೋರ ಅಸ್ರ, ಮಯೂರ ಅಸ್ರ, ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ನಗರಸಭಾ ಸದಸ್ಯ ಕೆ. ಎನ್. ರಾಮಕೃಷ್ಣ ಹೊಳ್ಳ, ಕೆ.ವಿ. ಶ್ರೀನಿವಾಸ ಹೊಳ್ಳ, ಕಿಶೋರ್ ಕುಮಾರ್ ಎಸ್.ವಿ.ಟಿ, ಕೆ.ವಿ ಶೇಷಾದ್ರಿ ಹೊಳ್ಳ, ಪುರಂದರ ಶೆಟ್ಟಿ, ರವಿ ಕೇಸರಿ, ಲಕ್ಷ್ಮೀಕಾಂತ ನೆಲ್ಲಿಕುಂಜೆ ಮೊದಲಾದವರು ಉಪಸ್ಥಿತರಿದ್ದರು.


