ಮಂಜೇಶ್ವರ: ಬಾಲವೇದಿ ಮಕ್ಕಳಿಗಾಗಿ ಸೃಜನೋತ್ಸವ ಕಾರ್ಯಕ್ರಮ ಗುವೇದಪಡ್ಪು ಪ್ರೇರಣಾ ಸಾರ್ವಜನಿಕ ಗ್ರಂಥಾಲಯದಲ್ಲಿ ಜರಗಿತು. ಕಾರ್ಯಕ್ರಮವನ್ನು ಶಿಕ್ಷಕಿ ಚೈತ್ರ ಶೆಟ್ಟಿ ಉದ್ಘಾಟಿಸಿದರು. ಗ್ರಂಥಾಲಯದ ಅಧ್ಯಕ್ಷ ಜಯರಾಮ ಕೊಣಿಬೈಲ್ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ರುಬೀನಾ ಟೀಚರ್, ಸರಸ್ವತಿ ಕೊಣಿಬೈಲ್, ಜಮೀಲಾ, ಮಾಧವ ಪರಂದಳ, ರತೀಶ್ ಕಾನ, ಗ್ರಂಥಾಲಯ ಕಾರ್ಯದರ್ಶಿ ಅಶೋಕ್ ಕೊಡ್ಲಮೊಗರು ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ 2025-26 ನೇ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ, ಪ್ಲಸ್ ಟು ವಿಭಾಗದಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು. ಬಳಿಕ ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಬಾಲವೇದಿ ಕಾರ್ಯದರ್ಶಿ ಅಂಕಿತಾ ಸ್ವಾಗತಿಸಿ, ಲಾವಣ್ಯ ಕಾರ್ಯಕ್ರಮ ನಿರೂಪಿಸಿದರು. ಗ್ರಂಥಪಾಲಕಿ ಜಯಶ್ರೀ ವಂದಿಸಿದರು.

.jpg)
