ಕುಂಬಳೆ: ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಭಕ್ತಿ, ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಶ್ರೀಕೃಷ್ಣನ ಜನ್ಮದಿನವನ್ನು ಸ್ಮರಿಸುವ ಈ ಪವಿತ್ರ ಸಂದರ್ಭದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಉದಯ ಕುಮಾರ್ ಮಾಯಿಪ್ಪಾಡಿ, ಕಂಬಾರು ಶ್ರೀದುರ್ಗಾ ಪರಮೇಶ್ವರಿ ದೇವಾಲಯದ ಆಡಳಿತ ಮೊಕ್ತೇಸರ ರವಿಶಂಕರ ಭಟ್ ಎಡಕ್ಕಾನ ಪಾಲ್ಗೊಂಡು ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳನ್ನು ತಿಳಿಸಿದರು. ಹಿರಿಯ ಅಧ್ಯಾಪಕ ಬಾಲಕೃಷ್ಣ ಶರ್ಮ ಶ್ರೀಕೃಷ್ಣನ ಜೀವನ, ಆತನ ಆದರ್ಶಗಳು ಹಾಗೂ ಭಗವದ್ಗೀತೆಯ ಸಂದೇಶಗಳ ಕುರಿತು ಮಾತನಾಡಿ, ವಿದ್ಯಾರ್ಥಿಗಳಿಗೆ ಸತ್ಯ, ಧರ್ಮ, ಪ್ರೀತಿ ಮತ್ತು ಕರ್ತವ್ಯನಿಷ್ಠೆಯಿಂದ ಜೀವನ ನಡೆಸುವಂತೆ ಪ್ರೇರೇಪಿಸಿದರು.
ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಪುಟಾಣಿ ಮಕ್ಕಳು ರಾಧಾ-ಕೃಷ್ಣರ ವೇಷಭೂಷಣವನ್ನು ಧರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಅವರ ಸುಂದರ ವೇಷಭೂಷಣ, ಮುಗ್ಧ ನಗು ಹಾಗೂ ಉತ್ಸಾಹಭರಿತ ಭಾಗವಹಿಸುವಿಕೆ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದಿತು. ಶಾಲಾ ಆಡಳಿತ ಸಮಿತಿಯ ಕಾರ್ಯದರ್ಶಿ ಎಚ್.ಎಸ್ ಪ್ರಸಾದ್, ಮಾತೃ ಸಮಿತಿಯ ಅಧ್ಯಕ್ಷೆ ದೀಪ ದೊಡ್ಡಮಾಣಿ, ಆಡಳಿತ ಸಮಿತಿಯ ಸದಸ್ಯ ಶ್ಯಾಮರಾಜ ದೊಡ್ಡಮಾಣಿ, ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ್ ಭಟ್ ದರ್ಬೆಮಾರ್ಗ, ಸಹಮುಖ್ಯ ಶಿಕ್ಷಕಿ ಚಿತ್ರಾ ಸರಸ್ವತಿ ಹಾಗೂ ಶಿಕ್ಷಕರು, ರಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು. ಶಿಕ್ಷಕಿಯರಾದ ಭವ್ಯ ಸ್ವಾಗತಿಸಿ, ಸ್ವಾತಿ ವಂದಿಸಿದರು. ದೇವಿಕಾ ಕಾರ್ಯಕ್ರಮ ನಿರೂಪಿಸಿದರು.

.jpg)
.jpg)
