HEALTH TIPS

ಮೋದಿ ಪ್ರಧಾನಿಯಾಗಿರುವವರೆಗೆ ರೈತರ ಹಿತಾಸಕ್ತಿಗಳಿಗೆ ಧಕ್ಕೆ ಇಲ್ಲ: ಕೇಂದ್ರ ಸಚಿವ

ಬಟಿಂಡಾ: ನರೇಂದ್ರ ಮೋದಿ ಅವರು ಪ್ರಧಾನಿಯಾಗಿರುವವರೆಗೆ ದೇಶದ ಮತ್ತು ಪಂಜಾಬ್‌ನ ರೈತರ ಹಿತಾಸಕ್ತಿಗಳಿಗೆ ಧಕ್ಕೆ ತರುವ ಶಕ್ತಿ ಜಗತ್ತಿನಲ್ಲಿ ಯಾರಿಗೂ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಸೋಮವಾರ(ಸೆ.21) ಹೇಳಿದ್ದಾರೆ.


ಮುಕ್ತ ವ್ಯಾಪಾರ ಒಪ್ಪಂದಗಳ(ಎಫ್‌ಟಿಎ) ಕುರಿತ ವಿರೋಧ ಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿರುವ ಶಿವರಾಜ್ ಸಿಂಗ್ ಚೌಹಾಣ್, 'ಅವರು ಬೇಕಾದಷ್ಟು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ. 

ಎಫ್‌ಟಿಎ ಜಾರಿಯಾಗುವುದರಿಂದ ರೈತರ ಹಿತಾಸಕ್ತಿಗಳಿಗೆ ಧಕ್ಕೆಯಾಗುತ್ತದೆ ಎಂದು ಹೇಳುತ್ತಿದ್ದಾರೆ. ಮೋದಿ ಪ್ರಧಾನಿಯಾಗಿರುವವರೆಗೆ ದೇಶದ ರೈತರಿಗೆ ಯಾವುದೇ ತೊಂದರೆ ಇಲ್ಲ ಎನ್ನುವುದನ್ನು, ಭಾರತದ ಕೃಷಿ ಸಚಿವನಾಗಿ ನಾನು ಭರವಸೆ ನೀಡುತ್ತೇನೆ' ಎಂದು ಹೇಳಿದ್ದಾರೆ.

ಇದೇ ವೇಳೆ ಎಎಪಿ ಸರ್ಕಾರವನ್ನು ಗುರಿಯಾಗಿಸಿಕೊಂಡು ಮಾತನಾಡಿದ ಅವರು, 'ರಾಜ್ಯ ಸರ್ಕಾರವು ಪ್ರಧಾನ್ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ಜಾರಿಗೊಳಿಸಿಲ್ಲ. ಇಲ್ಲದಿದ್ದರೆ ಬೆಳೆ ನಾಶಕ್ಕೆ ಸಂಪೂರ್ಣ ಪರಿಹಾರ ಸಿಗುತ್ತಿತ್ತು' ಎಂದು ಹೇಳಿದ್ದಾರೆ

ಪಂಜಾಬ್‌ ಮತ್ತು ಇಲ್ಲಿನ ಕೃಷಿ, ರೈತರನ್ನು ಉಳಿಸಬೇಕಾಗಿದೆ. ಉದ್ಯಮ ಮತ್ತು ಕೈಗಾರಿಕೆಗಳನ್ನು ರಾಜ್ಯಕ್ಕೆ ತರುವ ಮೂಲಕ ಉದ್ಯೋಗಾವಕಾಶಗಳನ್ನು ಕಲ್ಪಿಸಬೇಕಾಗಿದೆ. ಇಲ್ಲಿನ ಯುವಕರನ್ನು ಮಾದಕವ್ಯಸನದಿಂದ ಮುಕ್ತರನ್ನಾಗಿಸಬೇಕಾಗಿದೆ. ಇದನ್ನು ಬಿಜೆಪಿ ಮಾಡಲಿದೆ ಎಂದು ಹೇಳಿದ್ದಾರೆ.





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries