ಮಧೂರು: ತರುಣ ಕಲಾ ವೃಂದ ಉಳಿಯ ಇದರ ಆಶ್ರಯದಲ್ಲಿ ಪರಕ್ಕಿಲ ಶ್ರೀ ಮಹಾದೇವ ಶಾಸ್ತಾ ವಿನಾಯಕ ದೇವಸ್ಥಾನ ಪರಿಸರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು.
ತಂತ್ರಿ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಲು ಆಸ್ರ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ರಾಮ್ ಕಿಶೋರ್ ಆಸ್ರ ಅಧ್ಯಕ್ಷತೆ ವಹಸಿದ್ದರು. ಕಾಯ9ದರ್ಶಿ ಹರೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪದ್ಮರಾಜ ಸ್ವಾಗತಿಸಿ, ವಿಠಲ ಗಟ್ಟಿ ಪರಕ್ಕಿಲ ವಂದಿಸಿದರು. ಸಂಘದ ಪದಾಧಿಕಾರಿಗಳು, ಸರ್ವ ಸದಸ್ಯರು, ಮಹಿಳಾ ಸಮಿತಿ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಅನಿಲ್ ಕುಮಾರ್ ಮಾಸ್ತರ್ ಕಾರ್ಯಕ್ರಮ ನಿರೂಪಿಸಿದರು.

.jpg)
