HEALTH TIPS

ಮೋಪಾಲ ಶ್ರೀ ಮಹಾವಿಷ್ಣು ಕ್ಷೇತ್ರದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬದಿಯಡ್ಕ: ಎಡನೀರು ಶ್ರೀಮಠದ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಮಾರ್ಗದರ್ಶನ ಹಾಗೂ ದಿವ್ಯ ಆಶೀರ್ವಾದಗಳೊಂದಿಗೆ, 2027ರ ಜನವರಿ 19ರಿಂದ 26ರವರೆಗೆ ನಡೆಯಲಿರುವ ಮೋಪಾಲ ಶ್ರೀ ಮಹಾವಿಷ್ಣು ಕ್ಷೇತ್ರದ ನವೀಕರಣ, ಪುನಃಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀಗಳು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕಾಸರಗೋಡು ಸಂಸದ ರಾಜಮೋಹನ್ ಉಣ್ಣಿತ್ತಾನ್, ಕನ್ನಡ ಚಿತ್ರರಂಗದ ಹಿರಿಯ ನಟ ನೀರ್ನಳ್ಳಿ ರಾಮಕೃಷ್ಣ, ಕಾಸರಗೋಡಿನ ಖ್ಯಾತ ಸಂಗೀತಗಾರ ವಿದ್ವಾನ್ ಕಲ್ಮಾಡಿ ಸದಾಶಿವ ಆಚಾರ್ಯ, ಕರ್ನಾಟಕ ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷ ಟಿ. ಶ್ಯಾಮ ಭಟ್, ಉದ್ಯಮಿ ಮಧುಸೂದನ ಆಯರ್ ಮಂಗಳೂರು, ನವೀನ್ ಭಟ್ ಕುಂಜಿರಕಾನ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು. ಮೋಪಾಲ ಶ್ರೀ ಮಹಾವಿಷ್ಣು ಕ್ಷೇತ್ರದ ನವೀಕರಣ, ಪುನಃಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವವು ಭಕ್ತಿಭಾವ ಮತ್ತು ವೈಭವದಿಂದ ನೆರವೇರಲಿದ್ದು, ಈ ಪುಣ್ಯಕಾರ್ಯದಲ್ಲಿ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಮಹಾವಿಷ್ಣುವಿನ ಕೃಪೆಗೆ ಪಾತ್ರರಾಗಬೇಕೆಂದು ಬ್ರಹ್ಮಕಲಶೋತ್ಸವ ಸಮಿತಿ ವಿನಂತಿಸಿದೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries