ಬದಿಯಡ್ಕ: ಕುಂಬ್ಡಾಜೆ ಗ್ರಾಮ ಪಂಚಾಯಿತಿಯ ವಾರ್ಷಿಕ ಯೋಜನೆಯ ಅಂಗವಾಗಿ ಮಹಿಳೆಯರಿಗಾಗಿ ಆಯೋಜಿಸಲಾಗುವ ಯೋಗ ತರಬೇತಿ ಕಾರ್ಯಕ್ರಮಕ್ಕೆ ಯೋಗ ತರಬೇತುದಾರರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರದಿಂದ ಮಾನ್ಯತೆ ಪಡೆದ ಯೋಗ ತರಬೇತಿ ಪ್ರಮಾಣಪತ್ರ ಹೊಂದಿರುವ ಅಭ್ಯರ್ಥಿಗಳು ಅಕ್ಟೋಬರ್ 3ರೊಳಗಾಗಿ ಅರ್ಜಿಯನ್ನು ಗ್ರಾಮ ಪಂಚಾಯಿತಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 04998 260237.


