ಕಾಸರಗೋಡು: ನಾಡಿನಾದ್ಯಂತ ಇಂದು ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಶುಕ್ರವಾರ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಪೂಜೆ, ವಿವಿಧ ಸಂಘ-ಸಂಸ್ಥೆಗಳು, ಬಾಲ ಗೋಕುಲಗಳ ನೇತೃತ್ವದಲ್ಲಿ ಕೃಷ್ಣವೇಷ ಸಹಿತ ವಿವಿಧ ಸ್ಪರ್ಧಾ ಕಾರ್ಯಕ್ರಮ, ಧಾರ್ಮಿಕ ಸಭೆ, ಬಾಲಗೋಕುಲಗಳ ನೇತೃತ್ವದಲ್ಲಿ ಶೋಭಾಯಾತ್ರೆ ನಡೆಯಿತು.
ಬದಿಯಡ್ಕ ಸಹಿತ ಕೆಲವೆಡೆಗಳಲ್ಲಿ ಇಂದು ಬೆಳಿಗ್ಗೆ ಬೃಹತ್ ಶೋಭಾಯಾತ್ರೆ ನಡೆಯಿತು. ಇದರಲ್ಲಿ ಹಲವಾರು ಮಕ್ಕಳು ಕೃಷ್ಣ-ರಾಧೆಯರ ವೇಷ ಧರಿಸಿ ಪಾಲ್ಗೊಂಡಿದ್ದು, ಈ ಮೂಲಕ ಉತ್ಸವಾಚರಣೆಗೆ ಹೆಚ್ಚಿನ ಮೆರುಗು ನೀಡಿತು. ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಮಧೂರು ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನ, ಕುಂಬಳೆ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇಸ್ಥಾನ ಸೇರಿದಂತೆ ಜಿಲ್ಲೆಯ ದೇವಾಲಯಗಳಲ್ಲಿ ಭಕ್ತಾದಿಗಳ ದಟ್ಟಣೆಯೂ ಹೆಚ್ಚಾಗಿತ್ತು
ಜಿಲ್ಲೆಯಲ್ಲಿ ಪ್ರಮುಖವಾಗಿ ಕಾಸರಗೋಡು, ಬೋವಿಕ್ಕಾನ, ಕಾಞಂಗಾಡ್, ನೀಲೇಶ್ವರ, ಉದುಮ, ತ್ರಿಕರಿಪುರ, ಪಾಣತ್ತೂರು, ವೆಳ್ಳರಿಕುಂಡ್, ಮಾವಿಲಕಡಪ್ಪುರ, ತೈಕಡಪ್ಪುರ ಸೇರಿದಂತೆ ವಿವಿಧೆಡೆ ಆಕರ್ಷಕ ಟ್ಯಾಬ್ಲೋ, ಸ್ಬ್ಧಚಿತ್ರ, ಬ್ಯಾಂಡುಮೇಳಗಳೊಂದಿಗೆ ಬೃಹತ್ ಶೋಭಾಯಾತ್ರೆ ನಡೆಯಿತು.
ಸೀಮೆಯ ಪ್ರಸಿದ್ದ ಕುಂಬಳೆ ಕಣಿಪುರ ಶ್ರೀಗೋಪಾಲಕೃಷ್ಣ ದೇವಾಲಯದಲ್ಲಿ ಭಾರೀ ಜನಸ್ತೋಮ ಕಂಡುಬಂತು. ಬೆಳಿಗ್ಗೆಯಿಂದಲೇ ವಿಶೇಷ ಪೂಜೆಗಳು ನಡೆದು ರಾತ್ರಿ ಅಘ್ರ್ಯ ಪ್ರದಾನ ನಡೆಯಿತು.

.jpg)
.jpg)
