ಕಾಸರಗೋಡು: ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂ.ಎ. ಅರ್ಥಶಾಸ್ತ್ರ ಕೋರ್ಸ್‍ನಲ್ಲಿ ಜನರಲ್ ವರ್ಗದ ಒಂದು ಸೀಟು ಖಾಲಿಯಿದ್ದು, ಸೆಪ್ಟೆಂಬರ್ 8ರಂದು ಬೆಳಿಗ್ಗೆ 10.30ಕ್ಕೆ ಕಾಲೇಜಿನ ಪ್ರಾಂಶುಪಾಲರ ಕಚೇರಿಯಲ್ಲಿ ಸಂದರ್ಶನ ನಡೆಯುವುದು.
ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವಂತೆ ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ(04994 256027) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

