HEALTH TIPS

ಒಮಾನ್ ಕರಾವಳಿಯಲ್ಲಿ ವಾಣಿಜ್ಯ ಹಡಗಿನ ಮೇಲೆ ದಾಳಿ: ಭಾರತ ಖಂಡನೆ

ನವದೆಹಲಿ: ಒಮಾನ್ ಕರಾವಳಿಯಲ್ಲಿ ಸಂಚರಿಸುತ್ತಿದ್ದ ಸರಕು ಸಾಗಣೆ ಹಡಗನ್ನು ಗುರಿಯಾಗಿಸಿ ನಡೆದಿರುವ ದಾಳಿಯನ್ನು ಭಾರತ ಬುಧವಾರ ಖಂಡಿಸಿದೆ. ದಾಳಿ ವೇಳೆ ಭಾರತೀಯ ನಾವಿಕ ಮೃತಪಟ್ಟಿದ್ದಾರೆ. 


'ಭಾರತದ 20 ನಾವಿಕರಿದ್ದ 'ಎಂವಿ ಕೇಪ್‌ ದಾವೊ' ಹಡಗಿನ ಮೇಲೆ ಬುಧವಾರ ಬೆಳಿಗ್ಗೆ ದಾಳಿ ನಡೆದಿದ್ದು, 19 ಮಂದಿಯನ್ನು ರಕ್ಷಿಸಲಾಗಿದೆ.  ದುರದೃಷ್ಟವಶಾತ್‌ ಒಬ್ಬರು ಮೃತಪಟ್ಟಿದ್ದಾರೆ' ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿ ಹೇಳಿಕೆ ಬಿಡುಗಡೆ ಮಾಡಿರುವ ಸಚಿವಾಲಯ, 'ಒಮಾನ್‌ ಕರಾವಳಿಯಲ್ಲಿ ವಾಣಿಜ್ಯ ಹಡಗು 'ಎಂವಿ ಕೇಪ್‌ ದಾವೊ' ಮೇಲೆ ನಡೆದಿರುವ ದಾಳಿಯನ್ನು ಖಂಡಿಸುತ್ತೇವೆ. ಈ ರೀತಿ ವಾಣಿಜ್ಯ ಹಡಗುಗಳ ಮೇಲೆ ಪದೇ ಪದೇ ದಾಳಿ ನಡೆಯುತ್ತಿರುವುದು ತೀವ್ರ ಕಳವಳಕಾರಿ' ಎಂದು ಒತ್ತಿ ಹೇಳಿದೆ.

'ಉದ್ವಿಗ್ನತೆ ನಿಲ್ಲಬೇಕು. ಆ ಪ್ರದೇಶದಲ್ಲಿ ಶಾಂತಿ ಪುನಃಸ್ಥಾಪಿಸಲು ರಾಜತಾಂತ್ರಿಕ ಮಾರ್ಗ ಅನುಸರಿಸುವಂತೆ ಪುನರುಚ್ಚರಿಸುತ್ತೇವೆ. ವಾಣಿಜ್ಯ ಹಡಗುಗಳು, ನಾವಿಕರು ಮತ್ತು ನಾಗರಿಕರ ಮೂಲಸೌಕರ್ಯಗಳ ಮೇಲೆ ನಡೆಯುತ್ತಿರುವ ದಾಳಿ ನಿಲ್ಲಬೇಕು. ಅಂತರರಾಷ್ಟ್ರೀಯ ಜಲಮಾರ್ಗಗಳಲ್ಲಿ ಹಡಗುಗಳ ಸಂಚಾರ ಮತ್ತೆ ಸರಾಗವಾಗಿ ನಡೆಯುವಂತಾಗಬೇಕು' ಎಂದು ಒತ್ತಾಯಿಸಿದೆ.

'ಹಡಗು ಭಾರತದ ಕಡೆಗೆ ಸಂಚರಿಸುತ್ತಿದ್ದಾಗ ದಾಳಿ ನಡೆದಿದೆ. ರಕ್ಷಿಸಲಾಗಿರುವ ನಾವಿಕರನ್ನು ಭಾರತಕ್ಕೆ ಕರೆತರುವ ನಿಟ್ಟಿನಲ್ಲಿ ಒಮಾನ್‌ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ' ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries