ಬದಿಯಡ್ಕ: ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ ನೀರ್ಚಾಲು ಘಟಕ ಹಾಗೂ ಪ್ರಸಾದ್ ನೇತ್ರಾಲಯ, ಕಾಸರಗೋಡು ಇವರ ಸಹಯೋಗದಲ್ಲಿ ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಯಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.
ವ್ಯಾಪಾರಿ ಘಟಕದ ಅಧ್ಯಕ್ಷ ಎಂ. ಸುಬ್ರಹ್ಮಣ್ಯ ಭಟ್ ಅಧ್ಯಕ್ಷತೆ ವಹಿಸಿದ್ದರು. ಶಾಲಾ ವ್ಯವಸ್ಥಾಪಕ ಜಯದೇವ್ ಖಂಡಿಗೆ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯದರ್ಶಿ ರವಿ ನೀರ್ಚಾಲು ಸ್ವಾಗತಿಸಿದರು. ಡಾ. ಪ್ರತಿಮಾ ಅವರು ಕಣ್ಣಿನ ಆರೋಗ್ಯ, ಕಣ್ಣಿನ ಆರೈಕೆ ಹಾಗೂ ನಿಯಮಿತವಾಗಿ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳುವ ಮಹತ್ವದ ಕುರಿತು ಮಾಹಿತಿ ನೀಡಿದರು. ಬ್ಲಾಕ್ ಪಂಚಾಯತಿ ಸದಸ್ಯ ಮಹೇಶ್ ವಳಕ್ಕುಂಜ ವಂದಿಸಿದರು. ಶಿಬಿರದಲ್ಲಿ ಸಾರ್ವಜನಿಕರಿಗೆ ಕಣ್ಣಿನ ತಪಾಸಣೆ ನಡೆಸಲಾಗಿದ್ದು, ಕಣ್ಣಿನ ಆರೋಗ್ಯಕ್ಕೆ ಸಂಬಂಧಿಸಿದ ಅಗತ್ಯ ಸಲಹೆ ಹಾಗೂ ಮಾರ್ಗದರ್ಶನವನ್ನು ನೀಡಲಾಯಿತು. ಸಾರ್ವಜನಿಕರಿಗೆ ಉಪಯುಕ್ತವಾದ ಈ ಉಚಿತ ಕಣ್ಣಿನ ತಪಾಸಣಾ ಶಿಬಿರವು ಉತ್ತಮ ಸ್ಪಂದನೆಯೊಂದಿಗೆ ಯಶಸ್ವಿಯಾಗಿ ನೆರವೇರಿತು.


