HEALTH TIPS

ನ್ಯಾಯಾಧೀಶರ ಕಾರ್ಯವೈಖರಿ ಕುರಿತ ವರದಿಗೆ ಸೂಚನೆ

ನವದೆಹಲಿ (PTI): 2021ರ ಲಖೀಂಪುರ ಖೀರಿ ಹಿಂಸಾಚಾರ ಪ್ರಕರಣದ ತನಿಖೆಯ ನೇತೃತ್ವ ವಹಿಸಿರುವ ನ್ಯಾಯಾಧೀಶರ (ಪ್ರಿಸೈಡಿಂಗ್‌ ಆಫೀಸರ್‌) ಕಾರ್ಯವೈಖರಿ ಕುರಿತು, ವರದಿ ಸಲ್ಲಿಸುವಂತೆ ಅಲಹಾಬಾದ್‌ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅವರಿಗೆ ಸುಪ್ರೀಂ ಕೋರ್ಟ್‌ ಮಂಗಳವಾರ ಸೂಚಿಸಿದೆ. 


ಹಲವು ಎನ್‌ಡಿಪಿಎಸ್‌ ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣಗಳನ್ನು ವರ್ಗಾಯಿಸಿಕೊಂಡು, ಆರೋಪಿಗಳನ್ನು ಖುಲಾಸೆಗೊಳಿಸಿದ ಆರೋಪ ಈ ನ್ಯಾಯಾಧೀಶರ ಮೇಲಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ಮತ್ತು ನ್ಯಾಯಮೂರ್ತಿ ಗಳಾದ ಜಾಯ್‌ಮಾಲ್ಯಾ ಬಾಗ್ಚಿ, ವಿ.ಮೋಹನಾ ಅವರನ್ನು ಒಳಗೊಂಡ ನ್ಯಾಯಪೀಠವು, ಪ್ರಕರಣದ ಕುರಿತು ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದೆ.

ಲಖೀಂಪುರ ಖೀರಿ ಹಿಂಸಾಚಾರ ಪ್ರಕರಣದ ಪ್ರತ್ಯಕ್ಷದರ್ಶಿಗಳ ಪರ ಹಾಜರಿದ್ದ ವಕೀಲ ಪ್ರಶಾಂತ್‌ ಭೂಷಣ್‌ ಅವರು, 'ನನ್ನ ಕಕ್ಷಿದಾರರು ನ್ಯಾಯಾಲಯದ ಎದುರು ಹಾಜರಾಗಲು ಸಾಧ್ಯವಾಗದಿದ್ದಕ್ಕೆ ಅವರ ವಿರುದ್ಧ ನ್ಯಾಯಾಧೀಶರು (ಪ್ರಿಸೈಡಿಂಗ್‌ ಆಫೀಸರ್‌) ಜಾಮೀನುರಹಿತ ವಾರಂಟ್‌ ಹೊರಡಿಸಿದ್ದಾರೆ' ಎಂದು ಹೇಳಿದರು.

'ಪಬ್ಲಿಕ್‌ ಪ್ರಾಸಿಕ್ಯೂಟರ್‌ ಅವರನ್ನು ತನಿಖೆ ಮಧ್ಯದಲ್ಲಿ ಬದಲಾಯಿಸಲಾಗಿದೆ. ನೂತನವಾಗಿ ನೇಮಕಗೊಂಡವರಿಗೆ ಕೇವಲ ನಾಲ್ಕು ತಿಂಗಳ ಅನುಭವವಿದೆ' ಎಂದು ತಿಳಿಸಿದರು. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries