HEALTH TIPS

ಸರ್ ಎಂ.ವಿ. ವಿಶ್ವೇಶ್ವರಯ್ಯ ನಾಡಿಗೆ ನೀಡಿದ ಕೊಡುಗೆ ಅಪಾರ-ರಾಧಾಕೃಷ್ಣ ಕೆ. ಉಳಿಯತ್ತಡ್ಕ

ಕಾಸರಗೋಡು: ಇಂಜಿನುರ್ ಗಳು ದೇಶ ಕಟ್ಟುವ ಶಿಲ್ಪಿಗಳಾಗಿದ್ದು, ಈ ನಿಟ್ಟಿನಲ್ಲಿ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರು ಈ ನಾಡಿಗೆ ನೀಡಿರುವ ಕೊಡುಗೆ ಮಹತ್ವದ್ದಾಗಿದೆ ಎಂದು ಗಡಿನಾಡ ಚೇತನ ಪ್ರಶಸ್ತಿ ಪುರಸ್ಕøತ ಹಿರಿಯ ಸಾಹಿತಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ ತಿಳಿಸಿದ್ದಾರೆ. 


ಅವರು ಕಾಸರಗೋಡು ಅಡ್ಕತ್ತಬೈಲಿನಲ್ಲಿರುವ ಹೋಟೆಲ್ ಉಡುಪಿ ಗಾರ್ಡನ್‍ನ ಮಧುರಾ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಲ್ಲೊಬ್ಬರಾದ ಸರ್ ಎಂ. ವಿಶ್ವೇಶ್ವರಯ್ಯನವರ ಜನ್ಮ ದಿನಾಚರಣೆ ಮತ್ತು ಕನ್ನಡ ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಸರ್ ಎಂ. ವಿಶ್ವೇಶ್ವರಯ್ಯನವರ ಬದುಕು, ವ್ಯಕ್ತಿತ್ವ, ಸಾಧನೆಗಳ ಕುರಿತು ಮಾತನಾಡಿದರು. 

ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸಿದ್ದರು. 

ಹಿರಿಯ ಪತ್ರಕರ್ತ ಮಲಾರ್ ಜಯರಾಮ ರೈ ಉಪಸ್ಥಿತರಿದ್ದರು.   ಕ.ಸಾ.ಪ ಕೇರಳ ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಸ್ವಾಗತಿಸಿದರು. ಪತ್ರಕರ್ತ, ಕಲಾವಿದ ವಿ.ಜಿ ಕಾಸರಗೋಡು ಕಾರ್ಯಕ್ರಮ ನಿರೂಪಿಸಿದರು. ಗೌರವ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಬೇಳ ವಂದಿಸಿದರು. 

ಈ ಸಂದರ್ಭ ಕಾಸರಗೋಡಿನ ಕನ್ನಡ ಪತ್ರಕರ್ತರೊಂದಿಗೆ ಸೌಹಾರ್ದ ಸಂವಾದ ಕಾರ್ಯಕ್ರಮ ನಡೆಯಿತು. ಮಲಾರ್ ಜಯರಾಮ ರೈ ಸಂವಾದಕ್ಕೆ ಚಾಲನೆ ನೀಡಿದರು. ಪ್ರದೀಪ್ ಬೇಕಲ್, ಅಚ್ಯುತ ಚೇವಾರು, ಕೆ.ಎಂ ಸುಬ್ರಹ್ಮಣ್ಯ ಭಟ್, ದೇವದಾಸ್ ಪಾರೆಕಟ್ಟೆ, ಜಗನ್ನಾಥ ಶೆಟ್ಟಿ ಪಿ., ಕೆ, ಪುರುಷೋತ್ತಮ ಪೇರ್ಲ, ಪುರುಷೋತ್ತಮ ಭಟ್, ಪ್ರಕಾಶ್ ಮಂಜೇಶ್ವರ, ಗಣೇಶ್ ಪ್ರೈಕ, ಜೋನ್ ಡಿ'ಸೋಜ, ಸಂಜೀವ. ಬಿ, ಭಾಗ್ಯಶ್ರೀ ಸಿ, ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರಾದ ಯೋಗೀಶ್ ರಾವ್ ಚಿಗುರುಪಾದೆ, ತೆಕ್ಕೆಕೆರೆ ಶಂಕರನಾರಾಯಣ ಭಟ್, ಸುಕೇಶ.ಎ, ವಾಮನ ರಾವ್ ಬೇಕಲ್, ಸಿರಿಬಾಗಿಲು ರಾಮಕೃಷ್ಣ ಮಯ್ಯ, ಶಿವರಾಮ ಕಾಸರಗೋಡು, ಪೆರ್ಮುಖ ಈಶ್ವರ ಭಟ್, ರಾಜಾರಾಮ ರಾವ್ ಟಿ ಮೀಯಪದವು, ಬಿ.ರಾಮಮೂರ್ತಿ, ಇ ಇಶ ಕೂಡ್ಲು, ಗುರುರಾಜ್ ಎಂ. ಆರ್, ಉಷಾಲಕ್ಷ್ಮಿ .ಪಿ ಪಾಲ್ಗೊಂಡಿದ್ದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries