HEALTH TIPS

ಎಂ.ಎ. ಬೇಬಿಗೆ ಮಮತಾ ಕರೆ: ಬದ್ಧ ವೈರಿಗಳನ್ನು ಒಂದುಗೂಡಿಸಿದ ಚುನಾವಣಾ ಆಯೋಗದ ವಿವಾದ

ನವದೆಹಲಿ: ಎಸ್‌ಐಆರ್ ಸಂಬಂಧಿತ ಕೆಲ ನಿರ್ಧಾರಗಳನ್ನು ಮುಖ್ಯ ಚುನಾವಣಾ ಆಯುಕ್ತರು, ಏಕಪಕ್ಷೀಯವಾಗಿ ತೆಗೆದುಕೊಂಡಿರುವ ವಿಷಯ ಬಹಿರಂಗವಾಗುತ್ತಿದ್ದಂತೆ ವಿರೋಧ ಪಕ್ಷಗಳ ನಾಯಕರು ಹೋರಾಟದ ಹಾದಿ ಹಿಡಿದಿದ್ದಾರೆ. 


ಅದರಲ್ಲೂ, ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಸೋತು ಅಧಿಕಾರ ಕಳೆದುಕೊಂಡ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮ್ಮ ಹೋರಾಟವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವತ್ತ ಹೆಜ್ಜೆ ಇಟ್ಟಿದ್ದಾರೆ. 

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ನಡೆಸಿದ್ದಾರೆನ್ನಲಾದ ಅಕ್ರಮ ಕುರಿತಂತೆ ಕೇಂದ್ರವನ್ನು ಗುರಿಯಾಗಿಸಿಕೊಂಡು ಹೋರಾಟ ನಡೆಸಲು ಮೂರು ದಶಕಗಳ ನಂತರ, ಬದ್ಧವೈರಿಗಳಾದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಮತ್ತು ಸಿಪಿಐ(ಎಂ) ಪಕ್ಷಗಳು ಮುಂದಾಗಿವೆ. ಎರಡೂ ಪಕ್ಷಗಳ ಮುಖ್ಯಸ್ಥರು ಈ ಸಂಬಂಧ ಟೆಲಿಫೋನ್ ಮೂಲಕ ಮಾತುಕತೆ ನಡೆಸಿದಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಎಡೆಮಾಡಿದೆ.

ಚುನಾವಣಾ ಆಯೋಗ ಮತ್ತು ಭಾರತೀಯ ಪ್ರಜಾಪ್ರಭುತ್ವದ ವಿಶ್ವಾಸಾರ್ಹತೆ ಅಪಾಯದಲ್ಲಿದೆ ಎಂದು ಅಭಿಪ್ರಾಯಪಟ್ಟಿದ್ದ ಸಿಪಿಐ(ಎಂ) ನಾಯಕ ಎಂ.ಎ.ಬೇಬಿ, ಈ ಸಂಬಂಧ ತುರ್ತು ಸಂಘಟಿತ ಹೋರಾಟದ ಸ್ವರೂಪದ ಬಗ್ಗೆ ಚರ್ಚಿಸಲು ವಿರೋಧ ಪಕ್ಷಗಳ ಸಹಕಾರ ಕೋರಿ, ಡಿಎಂಕೆ, ಮಮತಾ ನೇತೃತ್ವದ ಟಿಎಂಸಿ, ಟಿವಿಕೆ, ಬಿಆರ್‌ಎಸ್, ಬಿಜೆಡಿ ಮತ್ತು ಎಎಪಿ ಸೇರಿದಂತೆ ಹಲವು ಪಕ್ಷಗಳಿಗೆ ಪತ್ರ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ, ಮಮತಾ, ಬೇಬಿ ಅವರಿಗೆ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.

ಸೆಪ್ಟೆಂಬರ್ 23ರಂದು ಬೇಬಿ, ವಿರೋಧ ಪಕ್ಷಗಳ ನಾಯಕರಿಗೆ ಪತ್ರ ಬರೆದಿದ್ದು, ಇದೇ ಭಾನುವಾರ ಎಎಪಿ ವರಿಷ್ಠ ಅರವಿಂದ ಕೇಜ್ರಿವಾಲ್ ಅವರನ್ನು ಭೇಟಿ ಮಾಡಲಿದ್ದಾರೆ. ಈ ನಡುವೆ, ಪತ್ರ ಆಧರಿಸಿ ಮಮತಾ ಸಹ ಕರೆಮಾಡಿ ಮಾತುಕತೆ ನಡೆಸಿದ್ದಾರೆ. ಸಿಪಿಐ(ಎಂ) ಮತ್ತು ಟಿಎಂಸಿ ಎರಡೂ ಪಕ್ಷಗಳು ಇಂಡಿಯಾ ಬಣದಲ್ಲಿ ಗುರುತಿಸಿಕೊಂಡಿದ್ದರೂ, ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಯಾವುದೇ ಸಂಪರ್ಕ ಹೊಂದಿರಲಿಲ್ಲ.

ಈ ಮಾತುಕತೆ ವೇಳೆ, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜೊತೆ ನಡೆಸಿರುವ ಚರ್ಚೆ ಕುರಿತಂತೆ ಮಮತಾ ಅವರುಮ ಬೇಬಿ ಗಮನಕ್ಕೆ ತಂದಿದ್ದಾರೆ. ಶೀಘ್ರ ಇಂಡಿಯಾ ಒಕ್ಕೂಟದ ಸಭೆ ಕರೆಯಬೇಕೆಂದು ಒತ್ತಾಯಿಸಿರುವುದಾಗಿ ಅವರು ತಿಳಿಸಿದ್ದಾರೆ.

ಕಾಕ್ರೋಚ್ ಜನತಾ ಪಕ್ಷಕ್ಕೂ ಬೇಬಿ ಪತ್ರ ಬರೆದಿದ್ದು, ಮುಖ್ಯವಾಹಿನಿಯ ಪಕ್ಷವೊಂದು ಯುವ ಹೋರಾಟದಿಂದ ಅಸ್ತಿತ್ವಕ್ಕೆ ಬಂದ ಸಿಜೆಪಿಯನ್ನು ಅಧಿಕೃತವಾಗಿ ಗುರುತಿಸಿದಂತಾಗಿದೆ.

ಇಂಡಿಯಾ ಬಣದ ಕೆಲ ನಾಯಕರೂ ಆದಷ್ಟು ಬೇಗ ಸಭೆ ಸೇರುವ ಉತ್ಸಾಹದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries