HEALTH TIPS

ಪೆರಡಾಲ ದೇವಸ್ಥಾನಕ್ಕೆ ಬಸ್ ಸಂಚಾರ ಪುನರಾರಂಭ

ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನಕ್ಕೆ ಬಸ್ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಆಗ್ರಹಿಸಿ ಬಿಜೆಪಿ ಬದಿಯಡ್ಕ ಪಂಚಾಯಿತಿ 13ನೇ ವಾರ್ಡಿನ ವತಿಯಿಂದ ಸಾರಿಗೆ ಇಲಾಖೆಗೆ ನೀಡಿದ ಮನವಿಯ ಹಿನ್ನೆಲೆಯಲ್ಲಿ ಭಾನುವಾರ ಸೂರ್ಯ ಸಂಸ್ಥೆಯ ಬಸ್ ಓಡಾಟ ಆರಂಭಿಸಿದೆ. 


ಬದಿಯಡ್ಕ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಹಾಗೂ 13ನೇ ವಾರ್ಡು ಸದಸ್ಯೆ ಅಶ್ವಿನಿ ಕೆ.ಎಂ. ಅವರು ನಿರಂತರ ಶ್ರಮಿಸಿದ್ದರು. ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ ವೇದಮೂರ್ತಿ ಶಿವರಾಮ ಭಟ್ ಪೆರಡಾಲ ಶ್ರೀದೇವರಲ್ಲಿ ಪ್ರಾರ್ಥಿಸಿ ಶುಭಾರಂಭಗೊಳಿಸಿದರು. ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ., ಗ್ರಾಮ ಪಂಚಾಯಿತಿ ಸದಸ್ಯ ಶ್ಯಾಮಪ್ರಸಾದ ಸರಳಿ, ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ಮೊಕ್ತೇಸರ ಜಗನ್ನಾಥ ರೈ, ಮಾಜಿ ಮೊಕ್ತೇಸರ ಚಂದ್ರಹಾಸ ರೈ, ಬಿಜೆಪಿ ಬದಿಯಡ್ಕ ಪಂಚಾಯಿತಿ ಸಮಿತಿ ಅಧ್ಯಕ್ಷ ಉದನೇಶ್ವರ ಬದಿಯಡ್ಕ, ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ಸೇವಾಸಮಿತಿಯ ಕಾರ್ಯದರ್ಶಿ ನಿರಂಜನ ರೈ ಪೆರಡಾಲ, ಭಾಸ್ಕರ ಪಂಜಿತ್ತಡ್ಕ, ರಾಮಚಂದ್ರ ಬೀಜಂತಡ್ಕ, ಶಿವಶಕ್ತಿ ಕ್ಲಬ್ಬಿನ ಸದಸ್ಯರು, ಭಕ್ತರು ಪಾಲ್ಗೊಂಡಿದ್ದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries