HEALTH TIPS

ಬಿಹಾರ: ಭಾರಿ ಮಳೆಯಿಂದಾಗಿ ಗಂಗಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ

ಪಾಟ್ನಾ: ಬಿಹಾರದಲ್ಲಿ ಭಾರಿ ಮಳೆಯಾಗುತ್ತಿದ್ದು, ಗಂಗಾ ನದಿಯ ಹಲವು ಕಡೆಗಳಲ್ಲಿ ಶನಿವಾರ(ಸೆ.5) ಪ್ರವಾಹ ಪರಿಸ್ಥಿತಿ ಉಂಟಾಗಿದೆ.


ಪಾಟ್ನಾ ಸಮೀಪದ ಗಾಂಧಿ ಘಾಟ್‌ನಲ್ಲಿ ಗಂಗಾ ನದಿಯ ನೀರಿನ ಪ್ರಮಾಣವು ಕಳೆದ ಕೆಲವು ಗಂಟೆಗಳಲ್ಲಿ 10 ಸೆ.ಮೀ ಏರಿಕೆಯಾಗಿದ್ದು, 50.53 ಸೆ.ಮೀ ತಲುಪಿದೆ.

ಗರಿಷ್ಠ ಪ್ರವಾಹ ಮಟ್ಟಕ್ಕಿಂತ 1 ಸೆ.ಮೀ ಎತ್ತರದಲ್ಲಿ ನದಿ ಹರಿಯುತ್ತಿದೆ ಎಂದು ಜಲ ಸಂಪನ್ಮೂಲ ಇಲಾಖೆಯ ಬುಲೆಟಿನ್ ತಿಳಿಸಿದೆ.

ಭಾನುವಾರಕ್ಕೆ ನದಿಯ ನೀರಿನ ಮಟ್ಟವು 50.62 ಸೆ.ಮೀ.ಗಿಂತ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಗಂಗಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ರಾಜಧಾನಿಯ ಸುತ್ತಲಿನ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆಯಿದೆ. ಹಾಗಾಗಿ, ಜನರಿಗೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೆರೆಯ ನೇಪಾಳ ಭಾರಿ ಮಳೆಯಾಗುತ್ತಿರುವುದರಿಂದ ಬಿಹಾರದ ಹಲವು ಜಿಲ್ಲೆಗಳಲ್ಲಿ ಗಂಗಾ, ಗಂಡಕ್, ಕೋಸಿ, ಬುರ್ಹಿ ಗಂಡಕ್, ಬಾಗ್ಮತಿ, ಪನ್ಪುನ್ ಮತ್ತು ಗಾಘ್ರ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕೆಲವು ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

ಬಿಹಾರ ಮುಖ್ಯಮಂತ್ರಿ ಸಮರ್ಥ್‌ ಚೌಧರಿ ಅವರು ಪ್ರವಾಹ ಪೀಡಿತ ಸ್ಥಳಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಪರಿಶೀಲಿಸಿದ್ದಾರೆ. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries