ಕುಂಬಳೆ: ಸೂರಂಬೈಲು ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ನಾಟಕ ಗಮಕ ಕಲಾ ಪರಿಷತ್ತು ಕೇರಳ ಗಡಿನಾಡ ಘಟಕ ಮತ್ತು ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆಯ ಆಶ್ರಯದಲ್ಲಿ ಗಮಕ ಶ್ರಾವಣ ಕಾರ್ಯಕ್ರಮ ನಡೆಯಿತು.
ಶಾಲಾ ರಕ್ಷಕ ಶಿಕ್ಷಕ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ದಯಾನಂದ ಪೆರ್ಣೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಗಮಕ ಪರಿಷತ್ತಿನ ಕಾರ್ಯದರ್ಶಿ ವಿ.ಬಿ. ಕುಳಮರ್ವ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಮಕ ಪರಿಷತ್ತಿನ ಕೇರಳ ಘಟಕದ ಅಧ್ಯಕ್ಷ ತೆಕ್ಕೆಕರೆ ಶಂಕರ ನಾರಾಯಣ ಭಟ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯೋಪಾಧ್ಯಾಯಿನಿ ಸುನೀತ ಎ. ಮುಖ್ಯ ಅತಿಥಿಯಾಗಿದ್ದರು. ಹಿರಿಯ ಶಿಕ್ಷಕಿ ದೇವಿಕರಾಣಿ ಕೆ.ಎಸ್. ಶುಭಾಶಂಸನೆಗೈದರು. ಸಾನ್ವಿ ಮತ್ತು ಅಮೃತ ಕೆ. ಗಮಕ ವಾಚನ ವ್ಯಾಖ್ಯಾನ ನಡೆಸಿದರು. ಕೀರ್ತನ ಸ್ವಾಗತಿಸಿ, ಧನುಪ್ರಿಯ ವಂದಿಸಿದರು. ಮನ್ವಿ ಮತ್ತು ಧನ್ವಿ ಕಾರ್ಯಕ್ರಮ ನಿರ್ವಹಿಸಿದರು. ಭಾನ್ವಿ, ಆತ್ಮಿತ, ಕೃತಿಕಾದೇವಿ ಪ್ರಾರ್ಥನೆ ಹಾಡಿದರು.

.jpg)
.jpg)
