HEALTH TIPS

ಪ್ರವಾಸಿ ತಾಣಗಳಲ್ಲಿ ಚಲನಚಿತ್ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ: ಅಶ್ವಿನ್ ವೈಷ್ಣವ್

ಏಕತಾ ನಗರ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಶಿಫಾರಸು ಮಾಡುವ ಪ್ರಮುಖ ಪ್ರವಾಸಿ ತಾಣಗಳಲ್ಲಿ ಇನ್ನು ಮುಂದೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನ್ ವೈಷ್ಣವ್ ತಿಳಿಸಿದ್ದಾರೆ. 


ಗುಜರಾತ್‌ನಲ್ಲಿರುವ ಏಕತಾ ಪ್ರತಿಮೆ ಬಳಿ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, 'ದೇಶದ ವಿವಿಧ ಭಾಗಗಳಲ್ಲಿ ಜಿ20 ಸಭೆಗಳನ್ನು ಆಯೋಜಿಸಿದ ರೀತಿಯಿಂದ ಸ್ಫೂರ್ತಿ ಪಡೆದು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭವನ್ನು ದೇಶದ ಅತ್ಯಂತ ಪ್ರಮುಖ ಪ್ರವಾಸಿ ತಾಣಗಳಲ್ಲಿ ಮಾಡುವುದು ಇದರ ಉದ್ದೇಶವಾಗಿದೆ. ಸಂಕುಚಿತ ರಾಜಕೀಯ ಚರ್ಚೆಗಳಿಗಿಂತ ದೇಶದ ಹಿತಾಸಕ್ತಿಗೆ ಆದ್ಯತೆ ನೀಡಬೇಕಾಗಿದೆ' ಎಂದು ಹೇಳಿದ್ದಾರೆ.

ದೇಶದಾದ್ಯಂತ 15 ಸಾವಿರ ಕ್ರಿಯೇಟಿವ್ ಲ್ಯಾಬ್‌ಗಳಿಗೆ ಪ್ರಧಾನಿ ಮೋದಿ ಅನುಮೋದನೆ ನೀಡಿದ್ದಾರೆ. ಇದು ಯುವಕರಿಗೆ ಹೊಸ ತಂತ್ರಜ್ಞಾನಗಳನ್ನು ಕಲಿಯಲು ಮತ್ತು ಅವರ ಸೃಜನಶೀಲತೆಯನ್ನು ವ್ಯಕ್ತಪಡಿಸಲು ಅವಕಾಶಗಳನ್ನು ನೀಡುತ್ತದೆ. ಭಾರತದ ವೈವಿಧ್ಯಮಯ ಸಂಸ್ಕೃತಿಯನ್ನು ಜಗತ್ತಿಗೆ ಕೊಂಡೊಯ್ಯಲು ಅವರು ಅವಕಾಶವನ್ನು ಪಡೆಯುತ್ತಾರೆ ಎಂದು ಹೇಳಿದ್ದಾರೆ.

ಈ ಬಾರಿಯ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭವನ್ನು ದೆಹಲಿಯಿಂದ ಗುಜರಾತ್‌ನ ಏಕತಾ ನಗರಕ್ಕೆ ಸ್ಥಳಾಂತರಿಸುವ ನಿರ್ಧಾರವನ್ನು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ, ಸಂಜಯ್ ರಾವತ್ ಸೇರಿದಂತೆ ವಿರೋಧ ಪಕ್ಷದ ನಾಯಕರು ಟೀಕಿಸಿದ್ದರು.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries