HEALTH TIPS

ಗಾಂಧಿ ಜಯಂತಿ-ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ

ಕಾಸರಗೋಡು: ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನಾಚರಣೆಯ ಅಂಗವಾಗಿ ಕೇರಳ ಖಾದಿ ಗ್ರಾಮೋದ್ಯೋಗ ಮಂಡಳಿಯು ಗಾಂಧಿ ಜಯಂತಿ ಸಪ್ತಾಹವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುತ್ತಿದೆ. ಕಾರ್ಯಕ್ರಮದ ಅಂಗವಾಗಿ 8ರಿಂದ 12ನೇ ತರಗತಿಯ ಹೈಸ್ಕೂಲ್ ಮತ್ತು ಹೈಯರ್ ಸೆಕೆಂಡರಿ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ.

ಸೆಪ್ಟೆಂಬರ್ 23ರಂದು ಬೆಳಗ್ಗೆ 11ಕ್ಕೆ ಕಾಞಂಗಾಡ್ ಮಾವುಂಗಾಲ್‍ನಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಸರಗೋಡು ಜಿಲ್ಲಾ ಖಾದಿ ಗ್ರಾಮೋದ್ಯೋಗ ಕಚೇರಿಯಲ್ಲಿ ಸ್ಪರ್ಧೆ ನಡೆಯಲಿದೆ.

ಗಾಂಧೀಜಿ, ಖಾದಿ, ಸ್ವಾತಂತ್ರ್ಯ ಹೋರಾಟ ಮತ್ತು ಸಾಮಾನ್ಯ ಜ್ಞಾನ' ವಿಷಯಗಳನ್ನು ಆಧರಿಸಿ ಸ್ಪರ್ಧೆ ನಡೆಯಲಿದೆ. ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆಯುವವರು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗುತ್ತಾರೆ. ಒಂದು ಶಾಲೆಯಿಂದ ಇಬ್ಬರು ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದೆ.

ಆಸಕ್ತ ವಿದ್ಯಾರ್ಥಿಗಳು ಶಾಲಾ ಅಧಿಕಾರಿಗಳು ದೃಢೀಕರಿಸಿದ ಪತ್ರದೊಂದಿಗೆ ಜಿಲ್ಲಾ ಖಾದಿ ಗ್ರಾಮೋದ್ಯೋಗ ಕಚೇರಿಯನ್ನು ಸಂಪರ್ಕಿಸಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಸೆಪ್ಟೆಂಬರ್ 22ರಂದು ಸಂಜೆ 3 ಗಂಟೆಯೊಳಗೆ ಹೆಸರು ನೋಂದಾಯಿಸಬೇಕು. ಇ-ಮೇಲ್: ಠಿoಞsಜ@ಞಞvib.oಡಿg. ದೂರವಾಣಿ: 0467 2200585, 9496133760, 7012800627.



  


  


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries