HEALTH TIPS

"ಪದ್ಮಭೂಷಣ ಸಣ್ಣದು, ಜ್ಞಾನೇಶ್ ಕುಮಾರ್ ರನ್ನು ಪ್ರಧಾನಿಯನ್ನಾಗಿ ಮಾಡಿಬಿಡಿ": ಪಶ‍್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥರನ್ನು ವ್ಯಂಗ್ಯವಾಡಿದ ಕಾಂಗ್ರೆಸ್

ನವದೆಹಲಿ; ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಪಾತ್ರಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಬೇಕು ಎಂಬ ಹೇಳಿಕೆ ನೀಡಿದ್ದ ಪಶ‍್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯರಿಗೆ ಶನಿವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ತಿರುಗೇಟು ನೀಡಿದ್ದಾರೆ.

ಸಮಿಕ್ ಭಟ್ಟಾಚಾರ್ಯರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪವನ್ ಖೇರಾ, "ಪದ್ಮಭೂಷಣ ತುಂಬಾ ಸಣ್ಣದು. ಅವರನ್ನು ಪ್ರಧಾನಿಯನ್ನಾಗಿ ಮಾಡಿ. ಇಷ್ಟಕ್ಕೂ ಬೇರೆಯವರನ್ನು ಪ್ರಧಾನಿಯನ್ನಾಗಿಸುವ ವ್ಯಕ್ತಿಯನ್ನೇ ಪ್ರಧಾನಿಯನ್ನಾಗಿಸಬೇಕು" ಎಂದು ವ್ಯಂಗ್ಯವಾಡಿದ್ದಾರೆ.

"ಜ್ಞಾನೇಶ್ ಕುಮಾರ್ ಅವರಿಗೆ ಕನಿಷ್ಠ ಪಕ್ಷ ಪದ್ಮಭೂಷಣ ಪ್ರಶಸ್ತಿಯನ್ನಾದರೂ ನೀಡಬೇಕು. ಚುನಾವಣಾ ಸಮಯದಲ್ಲಿ ಯಾವುದೇ ಬೆದರಿಕೆ ಇಲ್ಲದೆ, ಹತ್ಯೆಯಂಥ ಘಟನೆಗಳು ನಡೆಯದೇ ಹಾಗೂ ಜನರು ನೈಜವಾಗಿ ಮತ ಚಲಾಯಿಸುವ ಅವಕಾಶ ದೊರೆತಿದ್ದರಿಂದ ಪಶ್ಚಿಮ ಬಂಗಾಳದ ಜನತೆ ರೋಮಾಂಚನಗೊಂಡಿದ್ದಾರೆ" ಎಂದು ಸಮಿಕ್ ಭಟ್ಟಾಚಾರ್ಯ ಮುಖ್ಯ ಚುನಾವಣಾ ಆಯುಕ್ತರನ್ನು ಸಮರ್ಥಿಸಿಕೊಂಡಿದ್ದರು.

ಮತಪಟ್ಟಿ ಪರಿಷ್ಕರಣೆಯಲ್ಲಿ ಜ್ಞಾನೇಶ್ ಕುಮಾರ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದೂ ಅವರು ಪ್ರತಿಪಾದಿಸಿದ್ದರು.

ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯ ಕುರಿತು ಚುನಾವಣಾ ಆಯೋಗದಲ್ಲಿ ಆಂತರಿಕ ಭಿನ್ನಮತ ಹುಟ್ಟಿಕೊಂಡಿದೆ ಎಂಬ ವರದಿಯ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ವಿವಾದಕ್ಕೆ ಗುರಿಯಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries