ಮಧೂರು: ಕೀರ್ತಿಶೇಷ ಮಧೂರು ಗಣಪತಿ ರಾವ್ ಸಂಸ್ಮರಣೆ ಮತ್ತು ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ತಾಳಮದ್ದಳೆ ಸೆ. 4ರಂದು ಬೆಳಗ್ಗೆ 8.30ಕ್ಕೆ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಜರುಗಲಿದೆ.
ಹಿರಿಯ ಕಲಾವಿದ, ಲೇಖಕ ನಾ. ಕಾರಂತ ಪೆರಾಜೆ ಸಂಸ್ಮರಣಾ ಭಾಷಣ ಮಾಡುವರು. ನಿವೃತ್ತ ಪ್ರಾಧ್ಯಾಪಕ ಡಾ. ಕೆ.ಕಮಲಾಕ್ಷ ಅಧ್ಯಕ್ಷತೆ ವಹಿಸುವರು. 9ರಿಂದ 'ಶ್ರೀಕೃಷ್ಣ ತುಲಾಭಾರ'ಯಕ್ಷಗಾನ ತಾಳಮದ್ದಳೆ ಜರಗಲಿದೆ.

