ಕಾಸರಗೋಡು: ಖ್ಯಾತ ವೈದ್ಯ, ಹಿರಿಯ ಸಾಹಿತಿ, ಅರ್ಥಧಾರಿ ಡಾ. ರಮಾನಂದ ಬನಾರಿ ಅವರಿಗೆ "ಕಾಸರಗೋಡು ದಸರಾ ಕವಿ ಶ್ರೇಷ್ಠ ಪ್ರಶಸ್ತಿ "ನೀಡಿ ಗೌರವಿಸಲಾಗುವದು.
ನಗರದ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಮಣ್ಯ ದೇವಸ್ಥಾನದ ದಸರಾ ವೇದಿಕೆಯಲ್ಲಿ ಅ. 11ರಿಂದ 20ರ ವರೆಗೆ ನಡೆಯಲಿರುವ "ಕಾಸರಗೋಡು ದಸರಾ ಸಾಂಸ್ಕøತಿಕ ಉತ್ಸವ-2026ರ ಅಂಗವಾಗಿ ಅ. 18ರಂದು ನಡೆಯಲಿರುವ "ಕಾಸರಗೋಡು ದಸರಾ ಕವಿ ಸಮ್ಮೇಳನ "ದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮೈಸೂರಿನ ಖ್ಯಾತ ಕವಿ ಸಾಹಿತ್ಯ ರತ್ನ ಜಯಪ್ಪ ಹೊನ್ನಾಳಿ (ಜಯ ಕವಿ ಮೈಸೂರು )ಅದ್ಯಕ್ಷತೆಯಲ್ಲಿ ಕಾಸರಗೋಡು ದಸರಾ ಕವಿಗೋಷ್ಠಿ ನಡೆಯಲಿದೆ.
ಸಾಹಿತ್ಯ ಸಂಘಟಕ, ಬಿ. ಶ್ರೀನಿವಾಸ್ ಬಹಾದ್ದೂರ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ದಸರಾ ಕವಿ ಸಮ್ಮೇಳನವನ್ನು ಚುಟುಕು ಬ್ರಹ್ಮ, ಚುಟುಕು ಸಾಹಿತ್ಯ ಪರಿಷತ್ ಸಂಸ್ಥಾಪಕ ಡಾ. ಎಮ್. ಜಿ. ಆರ್. ಅರಸ್ ಮೈಸೂರು ಉದ್ಘಾಟಿಸುವರು.
ರಾಷ್ಟ್ರ ಮಟ್ಟದ 75ಮಂದಿ ಕವಿಗಳು ಭಾಗವಹಿಸುವ ಈ ಕಾರ್ಯಕ್ರಮ ದಲ್ಲಿ 21ಮಂದಿ ಕವಿಶ್ರೇಷ್ಠ ರಿಗೆ ರಾಷ್ಟ್ರೀಯ ಮಟ್ಟದ "ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ -2026.ನೀಡಿ ಗೌರವಿಸಲಾಗುವುದು ಎಂದು ಕಾಸರಗೋಡು ದಸರಾ ಸಂಚಾಲಕ, ಕನ್ನಡ ಭವನ ಸ್ಥಾಪಕ ಅಧ್ಯಕ್ಷರೂ ಆದ ಡಾ. ವಾಮನ್ ರಾವ್ ಬೇಕಲ್ ಹಾಗೂ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಮಣ್ಯ ದೇವಸ್ಥಾನ ಸಾಂಸ್ಕೃತಿಕ ಘಟಕ ಅಧ್ಯಕ್ಷರಾದ ಪಾಂಗೋಡು ಪ್ರವೀಣ್ ನಾಯಕ್ ಪತ್ರಿಕ ಹೇಳಿಕೆಯಲ್ಲಿ ತಿಳಿಸಿದ್ದಾರೆ.



