ಕುಂಬಳೆ: ಸೂರಂಬೈಲು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜಯೋತ್ಸವ ಕಾರ್ಯಕ್ರಮ ಜರಗಿತು. ಪುತ್ತಿಗೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಫಿದ ಊಜಂಪದವು ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ಪಿಟಿಎ ಅಧ್ಯಕ್ಷ ಮೊಯ್ದು ಸೀತಾಂಗೋಳಿ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಜಿಲ್ಲಾ ಪಂಚಾಯತಿ ಸದಸ್ಯ ಸೋಮಶೇಖರ ಜೆ.ಎಸ್, ಮಂಜೇಶ್ವರ ಬ್ಲಾಕ್ ಪಂಚಾಯತಿ ಸದಸ್ಯ ಮೊಹಮ್ಮದ್ ಜುನೈದ್ ಎಂ.ಕೆ, ಪುತ್ತಿಗೆ ಗ್ರಾಮ ಪಂಚಾಯತಿ ಸದಸ್ಯ ಸತೀಶ್ ಪೆರ್ಣೆ, ಕಾಸರಗೋಡು ಶಿಕ್ಷಣ ಉಪನಿರ್ದೇಶಕ ರಫೀಕ್ ಪಿ.ವಿ, ವಿ.ಎಚ್.ಎಸ್.ಇ ಉಪನಿರ್ದೇಶಕ ಉದಯಕುಮಾರಿ ಇ.ಆರ್, ಕಾಸರಗೋಡು ಜಿಲ್ಲಾ ಶಿಕ್ಷಣಾಧಿಕಾರಿ ಸವಿತ ಪಿ, ಕುಂಬಳೆ ಉಪಜಿಲ್ಲಾ ಸಹಾಯಕ ಶಿಕ್ಷಣಾಧಿಕಾರಿ ಅಶೋಕ ಎಂ, ನಿವೃತ್ತ ಡಿಡಿಇ ನಂದಿಕೇಶನ್ ಮುಖ್ಯ ಅತಿಥಿಗಳಾಗಿದ್ದರು. ಎಸ್.ಎಂ.ಸಿ. ಅಧ್ಯಕ್ಷ ಜಾನಿ ಡಿಸೋಜ, ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ದಿನೇಶ್ ನಾಯಕ್ ಸೂರಂಬೈಲು, ನಿವೃತ್ತ ಮುಖ್ಯೋಪಾಧ್ಯಾಯ ಗಿರಿಜಾನಾಥ, ನಿವೃತ್ತ ಶಿಕ್ಷಕ ಕಿರಣ್ ಕೆ. ಶುಭಾಶಂಸನೆಗೈದರು. ಮುಖ್ಯೋಪಾಧ್ಯಾಯಿನಿ ಸುನೀತ ಎ. ಸ್ವಾಗತಿಸಿ, ನೌಕರ ಸಂಘದ ಕಾರ್ಯದರ್ಶಿ ಶರತ್ ಕುಮಾರ್ ಆರ್. ವಂದಿಸಿದರು.

.jpeg)
