HEALTH TIPS

ಬಿಸಿಯೂಟದಲ್ಲಿ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ! ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ ಪೌಷ್ಟಿಕ ಆಹಾರ ಯೋಜನೆ

 ಚೆನ್ನೈ (ತಮಿಳುನಾಡು): ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಪೌಷ್ಟಿಕಯುಕ್ತ ಮತ್ತು ಪ್ರೋಟೀನ್ ಭರಿತ ಆಹಾರವನ್ನು ಒದಗಿಸುವುದು ಹಾಗೂ ಶಾಲೆಗಳಲ್ಲಿ ಮಕ್ಕಳ ಹಾಜರಾತಿಯನ್ನು ಹೆಚ್ಚಿಸುವ ಉದ್ದೇಶದೊಂದಿಗೆ, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಯೋಜನೆಯಡಿ (Mid-Day Meal Scheme) ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಹೊಸ ಯೋಜನೆಯನ್ನು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ನೇತೃತ್ವದ ತಮಿಳುನಾಡು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಆ  ಕುರಿತ ವರದಿ ಇಲ್ಲಿದೆ:


ಸರ್ಕಾರಿ ಶಾಲಾ ಮಕ್ಕಳಿಗೆ ಚಿಕನ್ ಬಿರಿಯಾನಿ ನೀಡುವುದು ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ದೊಡ್ಡ ಆಸೆಯಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಸಚಿವ ಎ. ರಾಜ್ ಮೋಹನ್ ಅವರು ಈ ಯೋಜನೆಯ ಪ್ರಸ್ತಾವನೆಯನ್ನು ಸರ್ಕಾರದ ಮುಂದೆ ಇಟ್ಟಿದ್ದು, "ಜೈಲಿನ ಕೈದಿಗಳಿಗೂ ಸಹ ಚಿಕನ್ ಬಿರಿಯಾನಿ ನೀಡಲಾಗುತ್ತದೆ, ಹಾಗಿರುವಾಗ ದೇಶದ ಭವಿಷ್ಯವಾಗಿರುವ ಮತ್ತು ಶಾಲೆಯಲ್ಲಿ ಓದುವ ಬಡ ಮಕ್ಕಳಿಗೆ ಅದನ್ನು ನೀಡಲು ಸಾಧ್ಯವಿಲ್ಲವೇ?" ಎಂದು ರಾಜ್ ಮೋಹನ್ ಪ್ರಶ್ನಿಸಿದ್ದಾರೆ.

ಮುಂದುವರೆದು, ಯೋಜನೆಯನ್ನು ಇಡೀ ರಾಜ್ಯಾದ್ಯಂತ ಜಾರಿಗೊಳಿಸುವ ಮುನ್ನ ಪ್ರಾಯೋಗಿಕವಾಗಿ ಕೆಲವು ಶಾಲೆಗಳಲ್ಲಿ ಪರೀಕ್ಷಿಸಲಾಗುತ್ತದೆ. ಹಾಗಾಗಿಯೇ, ಕೋಳಿ ಮಾಂಸವನ್ನು ಅತ್ಯಂತ ಸುವ್ಯವಸ್ಥಿತವಾಗಿ ಮತ್ತು ಶುಚಿಯಾಗಿ ಬೇಯಿಸಿ ಮಕ್ಕಳಿಗೆ ಉಣಬಡಿಸಲು ಅಗತ್ಯವಿರುವ ಸಿದ್ಧತೆಗಳ ಬಗ್ಗೆ ಸರ್ಕಾರ ಪರಿಶೀಲನೆ ನಡೆಸುತ್ತಿದೆ. ಮತ್ತೊಂದೆಡೆ, ಮಾಂಸಾಹಾರ ಸೇವಿಸದ ಅಥವಾ ಸಸ್ಯಹಾರಿ ಆಹಾರ ಇಷ್ಟಪಡುವ ವಿದ್ಯಾರ್ಥಿಗಳಿಗೆ ಎಂದಿನಂತೆ ಪೌಷ್ಟಿಕ ಸಸ್ಯಹಾರಿ ಊಟದ ವ್ಯವಸ್ಥೆ ಮುಂದುವರಿಯುತ್ತದೆ. ಮಾಂಸಾಹಾರಿ ಮಕ್ಕಳಿಗೆ ಮಾತ್ರ ಚಿಕನ್ ಬಿರಿಯಾನಿ ಆಯ್ಕೆಯನ್ನು ನೀಡಲಾಗುತ್ತದೆ ಎನ್ನಲಾಗಿದೆ.

ಏತನ್ಮಧ್ಯೆ, ತಮಿಳುನಾಡು ಸರ್ಕಾರವು ಈಗಾಗಲೇ ಶಾಲಾ ಮಕ್ಕಳಿಗೆ ಬೆಳಗಿನ ಉಪಹಾರ ಯೋಜನೆಯನ್ನು ಯಶಸ್ವಿಯಾಗಿ ವಿಸ್ತರಿಸಿದ್ದು, ಅದರ ಬೆನ್ನಲ್ಲೇ ಈ ಬಿರಿಯಾನಿ ಭಾಗ್ಯದ ಹೊಸ ಪ್ಲಾನ್ ಭಾರೀ ಚರ್ಚೆಗೆ ಮತ್ತು ಗಮನ ಸೆಳೆಯಲು ಕಾರಣವಾಗಿದೆ. ಆದರೆ, ಕರ್ನಾಟಕ ಸೇರಿದಂತೆ ಇತರ ಯಾವುದೇ ರಾಜ್ಯಗಳಲ್ಲಿ ಸದ್ಯಕ್ಕೆ ಇಂತಹ ಪ್ರಸ್ತಾವನೆ ಜಾರಿಯಲ್ಲಿಲ್ಲ.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries