ಬದಿಯಡ್ಕ: ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನಂ ನ ಶ್ರೀ ಎಡನೀರು ಮಠದ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಆರನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಅಂಗವಾಗಿ ನ್ಯಾಯಶಾಸ್ತ್ರದ ಮಹತ್ವ ವಿಶೇಷ ಉಪನ್ಯಾಸ ಕಾರ್ಯಕ್ರಮ ಸೆ. 12ರಂದು ಸಂಜೆ 5ಕ್ಕೆ ಶ್ರೀಮಠದ ಸಭಾಂಗಣದಲ್ಲಿ ಜರುಗಲಿದೆ.
'ಶ್ರೀ ಕೇಶವಾನಂದ ಭಾರತಿ ಮೊಕದ್ದಮೆ ಮತ್ತು ಭಾರತದ ಸನಾತನ ಪರಂಪರೆಗಳಲ್ಲಿ ನ್ಯಾಯಶಾಸ್ತ್ರದ ಮಹತ್ವ'ಎಂಬ ವಿಷಯದಲ್ಲಿ ಕರ್ನಾಟಕದ ಉಚ್ಛ ನ್ಯಾಯಾಲಯದ ನ್ಯಾಯಾಧೀಶ ವಿ.ಶ್ರೀಶಾನಂದ ವಿಶೇಷ ಉಪನ್ಯಾಸ ನೀಡಲಿದ್ದಾರೆ.


