HEALTH TIPS

ನೀಟ್ ಪ್ರತಿಭಟನಕಾರರ ವಿರುದ್ಧದ FIR ರದ್ದುಗೊಳಿಸುವಂತೆ ಕೋರಿ SCಗೆ ಕೇಂದ್ರ ಅರ್ಜಿ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ದೆಹಲಿ ಸೇರಿದಂತೆ ಇತರೆ ರಾಜ್ಯಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ಸಂಭವಿಸಿದ ಹಿಂಸಾಚಾರ ಆರೋಪದ ಮೇಲೆ ಪ್ರತಿಭಟನಕಾರರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಕೇಂದ್ರ ಸರ್ಕಾರವು ಸೋಮವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.


ಈ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ನೇತೃತ್ವದ ಪೀಠವು ಮಂಗಳವಾರ (ಸೆಪ್ಟೆಂಬರ್ 1) ನಡೆಸಲಿದೆ.

ಪ್ರತಿಭಟನಕಾರರ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸಲು ಸಂವಿಧಾನದ 142ನೇ ವಿಧಿಯಡಿಯಲ್ಲಿ ಸುಪ್ರೀಂ ಕೋರ್ಟ್‌ಗೆ ಇರುವ ವಿಶೇಷ ಅಧಿಕಾರವನ್ನು ಬಳಸಿಕೊಳ್ಳುವಂತೆ ಕೇಂದ್ರ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೋರಿದ್ದಾರೆ.

ಇದಕ್ಕೂ ಮುನ್ನ, ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್‌ನಿಂದ ದೆಹಲಿ ಪೊಲೀಸ್ ಪ್ರಧಾನ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸದಂತೆ ಸಿಜೆಪಿಗೆ ತಡೆ ನೀಡಲು ನ್ಯಾಯಾಲಯ ನಿರಾಕರಿಸಿತ್ತು.

ನಾವು ಶಾಂತಿಯುತ ಮತ್ತು ಕಾನೂನುಬದ್ಧವಾಗಿ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದೇವೆ ಎಂದು ಸಿಜೆಪಿ ವಕ್ತಾರರು ಭರವಸೆ ವ್ಯಕ್ತಪಡಿಸಿದ್ದರು.

ಕಾನೂನು ಸುವ್ಯವಸ್ಥೆ ಮತ್ತು ನೀತಿ ವಿಚಾರವಾಗಿ ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಾರೆ ಎಂದು ನ್ಯಾಯಾಲಯ ಭಾವಿಸಿರುವುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದರು.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries