HEALTH TIPS

Gujarat | ರಾಸಾಯನಿಕ ಕಾರ್ಖಾನೆಯಲ್ಲಿ ಅನಿಲ ಸೋರಿಕೆ: ಕಾರ್ಮಿಕ ಮೃತ್ಯು, ಮತ್ತೊಬ್ಬನಿಗೆ ಗಾಯ

ಅಹಮದಾಬಾದ್: ವಡೋದರದ ಹೊರವಲಯದಲ್ಲಿರುವ ಗುಜರಾತ್ ಸ್ಟೇಟ್ ಫರ್ಟಿಲೈಸರ್ಸ್ ಆಯಂಡ್ ಕೆಮಿಕಲ್ಸ್ ಲಿಮಿಟೆಡ್ (ಉSಈಅ) ಕೈಗಾರಿಕಾ ಘಟಕದಲ್ಲಿ ನಿರ್ವಹಣಾ ಕೆಲಸ ನಡೆಯುತ್ತಿದ್ದ ವೇಳೆ ಅನಿಲ ಸೋರಿಕೆಯಾಗಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. 


ಮೃತರನ್ನು ಬಾಜ್ವಾ ನಿವಾಸಿ ಘನಶ್ಯಾಮ್ ಗೋಹಿಲ್ ಎಂದು ಗುರುತಿಸಲಾಗಿದೆ. ಅವರು GSFC ಕಾರ್ಖಾನೆಯಲ್ಲಿ 25ಕ್ಕೂ ಹೆಚ್ಚು ವರ್ಷಗಳಿಂದ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಯೂರಿಯಾ ಘಟಕದಲ್ಲಿ ನಿರ್ವಹಣಾ ಕೆಲಸ ನಡೆಯುತ್ತಿದ್ದ ವೇಳೆ ಹಠಾತ್ ಅನಿಲ ಸೋರಿಕೆಯಾಗಿದೆ. ಇದರಿಂದ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಅಸ್ವಸ್ಥರಾಗಿದ್ದಾರೆ. ಇಬ್ಬರು ಕಾರ್ಮಿಕರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಘಟಕದೊಳಗೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಅಸ್ವಸ್ಥಗೊಂಡ ಇಬ್ಬರನ್ನೂ ತುರ್ತು ಚಿಕಿತ್ಸೆಗಾಗಿ ಛಾನಿಯಲ್ಲಿರುವ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಘನಶ್ಯಾಮ್ ಗೋಹಿಲ್ ಮಾರ್ಗಮಧ್ಯೆಯೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಮತ್ತೊಬ್ಬ ಕಾರ್ಮಿಕನಿಗೆ ಚಿಕಿತ್ಸೆ ಮುಂದುವರಿದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಛಾನಿ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ. ಅನಿಲ ಸೋರಿಕೆಗೆ ನಿಖರ ಕಾರಣವೇನು ಹಾಗೂ ನಿರ್ವಹಣಾ ಕೆಲಸದ ವೇಳೆ ಯಾವ ಸನ್ನಿವೇಶದಲ್ಲಿ ಅಪಘಾತ ಸಂಭವಿಸಿತು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

ನಿಗದಿತ ಸುರಕ್ಷತಾ ಶಿಷ್ಟಾಚಾರಗಳ ಪಾಲನೆಯಲ್ಲಿ ಲೋಪವಾಗಿತ್ತೇ ಅಥವಾ ಘಟಕದಲ್ಲಿನ ಸುರಕ್ಷತಾ ವ್ಯವಸ್ಥೆಯಲ್ಲಿ ಯಾವುದೇ ಕೊರತೆಯಿತ್ತೇ ಎಂಬ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries