HEALTH TIPS

Jammu and Kashmir | ಉಧಂಪುರದಲ್ಲಿ ಭದ್ರತಾಪಡೆಗಳಿಂದ ಇಬ್ಬರು ಭಯೋತ್ಪಾದಕರ ಹತ್ಯೆ; ಶಸ್ತ್ರಾಸ್ತ್ರಗಳ ವಶ

ಶ್ರೀನಗರ: ಜಮ್ಮು ಕಾಶ್ಮೀರದ ಉಧಂಪುರ ಜಿಲ್ಲೆಯ ಮಜಲ್ತಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.


ಅಧಿಕಾರಿಗಳ ಪ್ರಕಾರ, ಮಜಲ್ತಾದ ಸೋಹನ್ ಪ್ರದೇಶದಲ್ಲಿ ಶಂಕಿತ ಭಯೋತ್ಪಾದಕರ ಬಗ್ಗೆ ಮಾಹಿತಿ ಬಳಿಕ ಸಿಆರ್‌ಪಿಎಫ್‌ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಸೇನಾ ಕಾರ್ಯಾಚರಣೆಯನ್ನು ನಡೆಸಿದ್ದಾರೆ. 

ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳದಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ವಲಯದಲ್ಲಿ ಭಯೋತ್ಪಾದಕ ಚಟುವಟಿಕೆಯನ್ನು ತಡೆಯುವ ದೃಷ್ಟಿಯಿಂದ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries