HEALTH TIPS

ಮಂಗಳೂರು MRPLನಲ್ಲಿ ಭಾರೀ ಸ್ಫೋಟ | ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್

ಮಂಗಳೂರು: ಮಂಗಳೂರು ರಿಫೈನರಿ ಆಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭಾರೀ ಸ್ಫೋಟದಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. 


ಇಂದು ಮಧ್ಯಾಹ್ನ 12:15ರ ಸುಮಾರಿಗೆ ಒಖPಐನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕ (CHTU) ಘಟಕದಲ್ಲಿ ಭಾರಿ ಸ್ಫೋಟದ ನಂತರ ಬೆಂಕಿ ಕಾಣಿಸಿಕೊಂಡಿದೆ.

ಈ ವೇಳೆ ಘಟಕದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಈ ಪೈಕಿ ರಾಜೇಶ್ ಬ್ಯಾಪ್ಟಿಸ್ಟ್ ಎಂಬುವರಿಗೆ 35 ಶೇ. ಸುಟ್ಟ ಗಾಯಗಳಾಗಿವೆ. ಅವರನ್ನು ಚಿಕಿತ್ಸೆಗಾಗಿ ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಪ್ರಕಾರ ಅವರು ಅಪಾಯದಿಂದ ಪಾರಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದವರು ತಿಳಿಸಿದ್ದಾರೆ.

ಸ್ಫೋಟ ಸಂಭವಿಸಿದ ಘಟಕದ ಪಕ್ಕದ ಕಚೇರಿಯಲ್ಲಿದ್ದ ಆರು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸದ್ಯ ಬೆಂಕಿಯನ್ನು ನಿಯಂತ್ರಿಸಲಾಗಿದೆ. ನಾವು ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಓ ನರ್ವಡೆ ವಿನಾಯಕ್ ಕಾರ್ಭಾರಿ ಭೇಟಿ ನೀಡಿದ್ದಾರೆ. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries