HEALTH TIPS

MRPLನಲ್ಲಿ ಭಾರೀ ಸ್ಫೋಟ: ಮನೆಗಳಿಗೆ ಹಾನಿ, ಸ್ಥಳೀಯರ ಪ್ರತಿಭಟನೆ

ಮಂಗಳೂರು:  ಮಂಗಳೂರು ರಿಫೈನರಿ ಆಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (MRPL)ನಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭಾರೀ ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಕೆಲವು ಮನೆಗಳಿಗೆ ಹಾನಿಯಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.


ಮಧ್ಯಾಹ್ನ ಸುಮಾರು 12:20ರ ವೇಳೆಗೆ MRPLನ ಕೋಕರ್ ಹೈಡ್ರೋ ಟ್ರೀಟಿಂಗ್ ಯುನಿಟ್‌ (CHTU)ನಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಬಳಿಕ ಬೆಂಕಿ ಕಾಣಿಸಿಕೊಂಡಿದೆ.

ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. 12:45ರ ವೇಳೆಯಲ್ಲೂ ಕಂಪೆನಿಯ ಒಳಭಾಗದಿಂದ ತುರ್ತು ಎಚ್ಚರಿಕೆ ಸೈರನ್ ಮೊಳಗುತ್ತಿತ್ತು ಎನ್ನಲಾಗಿದೆ.

ಘಟನೆಯಲ್ಲಿ ಗಾಯಗೊಂಡ ನಾಲ್ವರನ್ನು ನಗರದ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಕೆಲ ಗಾಯಾಳುಗಳನ್ನು ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಓರ್ವ ಗಾಯಾಳುವನ್ನು MRPL ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಮನೆಗಳಿಗೆ ಹಾನಿ; ಸ್ಥಳೀಯರ ಆಕ್ರೋಶ

ಹಾನಿಗೊಳಗಾದ ಮನೆಗಳನ್ನು MRPL ಆಡಳಿತ ದುರಸ್ತಿ ಮಾಡಿಕೊಡಬೇಕು. ಇಲ್ಲದಿದ್ದರೆ ಕಂಪೆನಿಯಲ್ಲಿ ಕೆಲಸ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸ್ಥಳೀಯರು MRPLನ ಕಾರ್ಗೊ ಗೇಟ್ ಬಳಿ ಸುಮಾರು ಒಂದು ಗಂಟೆ ಪ್ರತಿಭಟನೆ ನಡೆಸಿದರು. ಗೇಟ್ ಬಂದ್ ಮಾಡಿ, ಜನರ ಪ್ರಾಣಕ್ಕಿಂತಲೂ ಕಂಪೆನಿಯ ಕೆಲಸವೇ ಮುಖ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಸ್ಫೋಟದಿಂದ 50ಕ್ಕೂ ಅಧಿಕ ಮಂದಿಗೆ ಗಾಯಗಳಾಗಿರುವ ಸಾಧ್ಯತೆ ಇದೆ ಎಂದು ಆರೋಪಿಸಿದರು.

ಸ್ಥಳಕ್ಕೆ ಆಗಮಿಸಿದ ಬಜ್ಪೆ ಪೊಲೀಸರು ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಬಳಿಕ ಪಣಂಬೂರು ಉಪವಿಭಾಗದ ಎಸಿಪಿ ಶ್ರೀಕಾಂತ್ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದರು. ಬಳಿಕ ಪ್ರತಿಭಟನಾಕಾರರನ್ನು ಸ್ಥಳದಿಂದ ಚದುರಿಸಲಾಯಿತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries