HEALTH TIPS

PMO ಅಧಿಕಾರಿ ಸೋಗು, ಅಂಗರಕ್ಷಕನ ಕೈಯಲ್ಲಿ ಗನ್: ಮೋದಿ ಕಾರ್ಯಕ್ರಮದಲ್ಲಿ ಆತಂಕ

ಮುಂಬೈ: ಪ್ರಧಾನಮಂತ್ರಿ ಕಚೇರಿ (ಪಿಎಂಒ) ಅಧಿಕಾರಿ ಎಂದು ಹೇಳಿಕೊಂಡು ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಬೇಕಿದ್ದ ಕಾರ್ಯಕ್ರಮದ ಸ್ಥಳಕ್ಕೆ ಪ್ರವೇಶಿಸಲು ಯತ್ನಿಸಿದ 24 ವರ್ಷದ ಯುವಕ ಹಾಗೂ ಆತನೊಂದಿಗೆ ಬಂದಿದ್ದ 'ಅಂಗರಕ್ಷಕ'ನನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ.  


ಮಂಗಳವಾರ ಸಂಜೆ ಮುಂಬೈನ ನೀತಾ ಮುಕೇಶ್ ಅಂಬಾನಿ ಸಾಂಸ್ಕೃತಿಕ ಕೇಂದ್ರದಲ್ಲಿ (ಎನ್‌ಎಂಎಸ್ಸಿಸಿ) 'ಗ್ಲೋಬಲ್ ಫಿನ್‌ಟೆಕ್ ಫೆಸ್ಟ್‌-2026' ಕಾರ್ಯಕ್ರಮ ಆಯೋಜನೆಯಾಗಿದ್ದು , ಪ್ರಧಾನಿ ಮೋದಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಇದಕ್ಕೂ ಮುನ್ನ ಸ್ಥಳಕ್ಕೆ ಬಂದ ಯುವಕ, ತನ್ನನ್ನು ಪಿಎಂಒ ಅಧಿಕಾರಿಯೆಂದು ಪರಿಚಯಿಸಿಕೊಂಡು ಒಳ ಪ್ರವೇಶಿಸಲು ಯತ್ನಿಸಿದ್ದಾನೆ.

ಯುವಕನ ವರ್ತನೆ ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿ ಆತನನ್ನು ತಡೆದು, ಗುರುತಿನ ಚೀಟಿ ಕೇಳಿದ್ದಾರೆ. ಆದರೆ, ಯಾವುದೇ ಅಧಿಕೃತ ದಾಖಲೆ ನೀಡಲು ಆತನಿಗೆ ಸಾಧ್ಯವಾಗಿಲ್ಲ. ಆತನೊಂದಿಗೆ ಬಂದಿದ್ದ 'ಅಂಗರಕ್ಷಕ'ನ ಬಳಿ ಬಂದೂಕು ಇರುವುದು ಪರಿಶೀಲನೆ ವೇಳೆ ಪತ್ತೆಯಾಗಿದೆ.

ಇಬ್ಬರನ್ನೂ ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮುಂಬೈ ಕ್ರೈಂ ಬ್ರ್ಯಾಂಚ್ ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದು, ಇಬ್ಬರ ಗುರುತನ್ನು ಪೊಲೀಸರು ಬಹಿರಂಗಪಡಿಸಿಲ್ಲ.

'ಗ್ಲೋಬಲ್ ಫಿನ್‌ಟೆಕ್ ಫೆಸ್ಟ್‌'ನಲ್ಲಿ ಹಣಕಾಸು ತಂತ್ರಜ್ಞಾನ, ನಿಯಂತ್ರಣ, ಹೂಡಿಕೆ ಹಾಗೂ ಡಿಜಿಟಲ್ ಹಣಕಾಸು ಕ್ಷೇತ್ರದ ಭವಿಷ್ಯದ ಕುರಿತು ಚರ್ಚೆ ನಡೆಯಲಿದೆ. 








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries