HEALTH TIPS

ಎಸ್‌ಐಆರ್ | ಬಿಜೆಪಿ, RSS, ಚುನಾವಣಾ ಆಯೋಗದಿಂದ ದೇಶದ್ರೋಹದ ಕೃತ್ಯ: ರಾಹುಲ್ ಗಾಂಧಿ

ನವದೆಹಲಿ: ಮತಗಳ್ಳತನವು ಸಂವಿಧಾನದ ಮೇಲಿನ ನೇರ ದಾಳಿಯಾಗಿದೆ. ಬಿಜೆಪಿ, ಆರ್‌ಎಸ್‌ಎಸ್ ಮತ್ತು ಚುನಾವಣಾ ಆಯೋಗವು ಸೇರಿಕೊಂಡು ಈ ದೇಶದ್ರೋಹದ ಕೃತ್ಯವನ್ನು ಮಾಡಿದ್ದಾರೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಆರೋಪಿಸಿದ್ದಾರೆ. 


ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 'ಮತಗಳ್ಳತನವು ಭಾರತೀಯರ ಮೇಲೆ ಮಾಡಿರುವ ಅಪರಾಧವಾಗಿದೆ.

ಈ ಪ್ರಕರಣದಲ್ಲಿ ನ್ಯಾಯ ದೊರಕಿಸಿಕೊಡಲಾಗುವುದು' ಎಂದು ಹೇಳಿದ್ದಾರೆ.

ಅದೇ ಪೋಸ್ಟ್‌ನಲ್ಲಿ, ಚುನಾವಣಾ ಆಯೋಗದ ಅಧಿಕಾರಿಗಳು ದೇಶದ್ರೋಹದ ಕೆಲಸ ಮಾಡುತ್ತಿದ್ದು, ಅವರನ್ನು ಕ್ಷಮಿಸಲಾಗುವುದಿಲ್ಲ ಎಂದು ಈ ಹಿಂದೆ ಹೇಳಿದ್ದನ್ನು ಕೂಡ ಅವರು ಹಂಚಿಕೊಂಡಿದ್ದಾರೆ.

ಚುನಾವಣಾ ಆಯೋಗದ ಮೂವರು ಆಯುಕ್ತರಲ್ಲಿ, ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಎಸ್‌ಐಆರ್ ಸಂಬಂಧಿಸಿದ ವಿಷಯಗಳ ಕುರಿತು ಪದೇ ಪದೇ ಪ್ರಶ್ನೆಗಳನ್ನು ಎತ್ತಿದ್ದರು ಎಂಬ ವಿಷಯವನ್ನು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಬಹಿರಂಗಪಡಿಸಿದ ನಂತರ ರಾಹುಲ್ ಗಾಂಧಿ ಅವರು ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ್ದಾರೆ.

ಮೂವರು ಆಯ್ತುಕರ ಮೇಲ್ವಿಚಾರಣೆಯಲ್ಲಿ ದೇಶದಾದ್ಯಂತ ಎಸ್‌ಐಆರ್ ನಡೆಯುತ್ತಿದೆ. ಆದರೆ, ಸಂಧು ಮತ್ತು ಜೋಶಿ ಅವರು ಈ ಕುರಿತು ಹಲವು ಬಾರಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಮಗೆ ಗೊತ್ತಿಲ್ಲದೇ ಕೆಲವು ಬಾರಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ಆರೋಪಿಸಿದ್ದಾರೆ ಎಂದು ವರದಿಯಾಗಿತ್ತು.


Vote chori is a crime against the Indian people and a direct attack on our constitution. The BJP, RSS and EC who organised it have committed an act of treason. Justice will be served.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries