HEALTH TIPS

ಜ್ಞಾನೇಶ್ ಕುಮಾರ್ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಸಂಶಯ: ವಿಚಾರಣೆಗೆ SC ಸಮ್ಮತಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಇತರ ಇಬ್ಬರು ಚುನಾವಣಾ ಆಯುಕ್ತರ ಸಮ್ಮತಿಯಿಲ್ಲದೆ ಆಯೋಗದ ಪರವಾಗಿ ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಬಹುದೇ ಎಂದು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿಸಿದೆ.  


ಹಿರಿಯ ವಕೀಲ ವಿಕಾಸ್ ಸಿಂಗ್ ಅವರು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ನೇತೃತ್ವದ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ವಿಚಾರವಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್ ಸಂಧು, ವಿವೇಕ್‌ ಜೋಶಿ ಅವರ ನಡುವಿನ ಭಿನಾಭಿಪ್ರಾಯ ಮೂಡಿರುವ ಬಗ್ಗೆ ಸಿಂಗ್ ಪ್ರಸ್ತಾಪಿಸಿದ್ದಾರೆ.

ಬಹು ಸದಸ್ಯತ್ವದ ಹೊಂದಿರುವ ಆಯೋಗದ ನಿರ್ಧಾರಗಳು ಸರ್ವಾನುಮತದಿಂದ ಅಥವಾ ಬಹುಮತದಿಂದ ಕೂಡಿರಬೇಕು ಎಂಬುದು ಶಾಸನಬದ್ಧ ನಿಯಮ ಎಂದು ವಿಕಾಸ್ ಸಿಂಗ್ ಪ್ರತಿಪಾದಿಸಿದ್ದಾರೆ.

ಬಹು-ಸದಸ್ಯ ಆಯೋಗವನ್ನು ಹೊಂದುವ ಉದ್ದೇಶವು ಆದೇ ಆಗಿದೆ. ಯಾವುದೇ ನಿರ್ಧಾರವು ಸರ್ವಾನುಮತದಿಂದ ಅಥವಾ ಬಹುಮತದಿಂದ ಕೂಡಿರಬೇಕು. ಈಗ, ಚುನಾವಣಾ ಆಯೋಗ ಕಾರ್ಯನಿರ್ವಹಿಸಿದ ರೀತಿಯನ್ನು ನೋಡಿದರೆ, ಈ ಸಂಪೂರ್ಣ 'ಎಸ್‌ಐಆರ್'ನ ಇಡೀ ಪ್ರಕ್ರಿಯೆಗೆ ಚುನಾವಣಾ ಆಯೋಗದ ಅಧಿಕೃತ ನಿರ್ಧಾರವಿತ್ತೇ ಎಂಬ ಬಗ್ಗೆ ಗಂಭೀರ ಸಂಶಯ ಮೂಡುತ್ತದೆ.

ಒಂದು ವೇಳೆ ಚುನಾವಣಾ ಆಯೋಗವು ಸರ್ವಾನುಮತದ ನಿರ್ಧಾರವನ್ನು ತೆಗೆದುಕೊಳ್ಳದಿದ್ದರೆ... ನ್ಯಾಯಾಲಯವು ಕೂಡ ಇದು ಆಯೋಗದ ನಿರ್ಧಾರ ಎಂಬ ಆಧಾರದ ಮೇಲೆಯೇ ವಿಚಾರಣೆ ನಡೆಸಲು ತೀರ್ಮಾನಿಸಿದೆ. ಆದ್ದರಿಂದ ಇದು ಗಂಭೀರ ವಿಷಯವಾಗಿದೆ ಎಂದು ಸಿಂಗ್ ತಿಳಿಸಿದ್ದಾರೆ.

ಸಿಂಗ್ ಪ್ರಸ್ತಾಪನೆ ಕುರಿತು ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಕಾಂತ್, ಈ ಅರ್ಜಿಯನ್ನು ವಿಚಾರಣೆಗಾಗಿ ಮುಂದಿನ ವಾರ ಪಟ್ಟಿಯಲ್ಲಿ ಸೇರಿಸಲಾಗುವುದು ಎಂದು ಹೇಳಿದ್ದಾರೆ.

ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ರಾಕೇಶ್ ಕುಮಾರ್ ಸಿಂಗ್ ಸಲ್ಲಿಸಿರುವ ಈ ಅರ್ಜಿಯು, 324ನೇ ವಿಧಿಯ ಅಡಿಯಲ್ಲಿ ಚುನಾವಣಾ ಆಯೋಗಕ್ಕೆ ನೀಡಲಾದ ಅಧಿಕಾರವನ್ನು ಮುಖ್ಯ ಚುನಾವಣಾ ಆಯುಕ್ತರು ವೈಯಕ್ತಿಕವಾಗಿ ಅಲ್ಲದೆ, ಆಯೋಗವು ಬಹು-ಸದಸ್ಯ ಸಂಸ್ಥೆಯಾಗಿ ಚಲಾಯಿಸಬೇಕು ಎಂದು ಕೋರಲಾಗಿದೆ.

ಆಯೋಗದ ಹೆಸರಿನಲ್ಲಿ ತೆಗೆದುಕೊಂಡ ನಿರ್ಧಾರಗಳ ವಿರುದ್ಧ ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ವ್ಯಕ್ತಪಡಿಸಿದ ಆಕ್ಷೇಪಣೆಗಳ ಹಿನ್ನೆಲೆಯಲ್ಲಿ ಈ ಅರ್ಜಿಯನ್ನು ಸಲ್ಲಿಸಲಾಗಿದೆ.

ಎಸ್‌ಐಆರ್‌ ಕುರಿತು ಆಯೋಗದ ಅನುಮೋದನೆಯಿಲ್ಲದೆ ಕೈಗೊಳ್ಳಲಾಗಿದೆ ಎಂದು ಪರಿಗಣಿಸಲಾದ ಕ್ರಮಗಳ ಕುರಿತು 2025ರ ಅಕ್ಟೋಬರ್ ಮತ್ತು 2026ರ ಆಗಸ್ಟ್ ನಡುವೆ ಇಬ್ಬರು ಆಯುಕ್ತರು ಕನಿಷ್ಠ 14 ಬಾರಿ ಆಕ್ಷೇಪಣೆ ಸಲ್ಲಿಸಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಇದು ಜ್ಞಾನೇಶ್ ಕುಮಾರ್ ಅವರು ಏಕಪಕ್ಷೀಯವಾಗಿ ತೆಗೆದುಕೊಂಡ ನಿರ್ಧಾರಗಳ ಕುರಿತು ಆಂತರಿಕ ಭಿನ್ನಾಭಿಪ್ರಾಯವಿರುವುದನ್ನು ಸೂಚಿಸುತ್ತದೆ. 






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries