HEALTH TIPS

SIR ವೇಳೆ ಕೆಲಸ ಕಳೆದುಕೊಂಡ ಶಿಕ್ಷಕಿ ನಂದಿಗ್ರಾಮ ಉಪಚುನಾವಣೆಯಲ್ಲಿ TMC ಅಭ್ಯರ್ಥಿ

ಕೋಲ್ಕತ್ತ: ಕಳೆದ 15 ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಮಮತಾ ಬ್ಯಾನರ್ಜಿ ಕಾಣಿಸಿಕೊಳ್ಳುತ್ತಿಲ್ಲ.


ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಎದುರು ಮುಖಭಂಗ ಅನುಭವಿಸಿದ ನಂತರ ಪಕ್ಷದೊಳಗೆ ತೀವ್ರ ಬಂಡಾಯ ಎದುರಿಸುತ್ತಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ, ವಿಧಾನಸಭೆಗೆ ಮರಳಿ ಪ್ರವೇಶ ಪಡೆಯಲು ನಂದಿಗ್ರಾಮ ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂಬ ಊಹಾಪೋಹಗಳು ಹರಡಿದ್ದವು.

ಆದರೆ, ಟಿಎಂಸಿ ಈಗ ನಂದಿಗ್ರಾಮ ಕ್ಷೇತ್ರದಿಂದ ಸಂಚಿತಾ ಪ್ರಧಾನ್ ಡೇ ಅವರನ್ನು ತನ್ನ ಅಭ್ಯರ್ಥಿ ಎಂದು ಘೋಷಿಸುವುದರೊಂದಿಗೆ ಆ ಎಲ್ಲಾ ಊಹಾಪೋಹಗಳಿಗೆ ತೆರೆಬಿದ್ದಿದೆ.

ನಂದಿಗ್ರಾಮ ಮತ್ತು ರೆಜಿನಗರ ಕ್ಷೇತ್ರಗಳ ಉಪಚುನಾವಣೆ ಅಕ್ಟೋಬರ್ ಮೊದಲ ವಾರದಲ್ಲಿ ನಡೆಯಲಿದೆ. ವಿಧಾನಸಭಾ ಚುನಾವಣೆಯ ನಂತರ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ನಡುವೆ ನಡೆಯಲಿರುವ ಎರಡನೇ ಸುತ್ತಿನ ಸಮರ ಇದಾಗಿದೆ.

ಬಂಗಾಳದ ಮಾಜಿ ಸಚಿವ ಅಖಿಲ್ ಗಿರಿ ಅವರು ಇತ್ತೀಚೆಗೆ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ ಟಿಕೆಟ್‌ ಕೇಳಿದ್ದರು. ಆದರೆ ಭಾನುವಾರ ಮಮತಾ ಬ್ಯಾನರ್ಜಿ ಅವರು ಸಂಚಿತಾ ಪ್ರಧಾನ್ ಡೇ ಅವರನ್ನು ನಂದಿಗ್ರಾಮದ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ.

ಶಿಕ್ಷಕಿಯಾಗಿದ್ದ ಸಂಚಿತಾ ಪ್ರಧಾನ್ ಡೇ ಅವರು ಎಸ್‌ಐಆರ್ ವೇಳೆ ತಮ್ಮ ಕೆಲಸ ಕಳೆದುಕೊಂಡಿದ್ದರು ಎಂದು ಮಾಧ್ಯಮಗಳ ವರದಿ ಮಾಡಿವೆ.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries