HEALTH TIPS

Uttar Pradesh | ರಾಜಕೀಯ ಪ್ರವೇಶ ಘೋಷಿಸಿದ ಮಾಜಿ IAS ಅಧಿಕಾರಿ ದಿವ್ಯಾ ಮಿತ್ತಲ್; ಯಾವುದೇ ಪಕ್ಷ ಸೇರಲು ನಕಾರ

ಲಕ್ನೊ:  ನಾಗರೀಕ ಸೇವೆಗೆ ರಾಜೀನಾಮೆ ಸಲ್ಲಿಸಿದ ಕೆಲವೇ ದಿನಗಳ ಬಳಿಕ ಉತ್ತರ ಪ್ರದೇಶ ಕೇಡರ್ನ ಮಾಜಿ IAS ಅಧಿಕಾರಿ ದಿವ್ಯಾ ಮಿತ್ತಲ್ ಮಂಗಳವಾರ ರಾಜಕೀಯ ಪ್ರವೇಶಿಸುವುದಾಗಿ ಘೋಷಿಸಿದ್ದಾರೆ. ತಮ್ಮ ರಾಜಕೀಯ ಪಯಣ ಉತ್ತರ ಪ್ರದೇಶದಿಂದಲೇ ಆರಂಭವಾಗಲಿದೆ ಎಂದು ಹೇಳಿರುವ ಅವರು, ಯಾವುದೇ ರಾಜಕೀಯ ಪಕ್ಷವನ್ನು ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


ದಿವ್ಯಾ ಮಿತ್ತಲ್ ಅವರು IAS ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಬಳಿಕ ಅವರ ಮುಂದಿನ ರಾಜಕೀಯ ನಡೆ ಕುರಿತು ಹಲವು ವದಂತಿಗಳು ಹರಡಿದ್ದವು. ಮಂಗಳವಾರ ಈ ಕುರಿತು ಸ್ಪಷ್ಟನೆ ನೀಡಿದ ಅವರು, ಯಾವುದೇ ರಾಜಕೀಯ ಪಕ್ಷಕ್ಕೆ ಸೇರ್ಪಡೆಯಾಗುವ ಬದಲು ಜನರೊಂದಿಗೆ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.

'ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರ್ಪಡೆಯಾಗುವುದಿಲ್ಲ. ಜನರೊಂದಿಗೆ ಕೆಲಸ ಮಾಡಲಿದ್ದೇನೆ' ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇರುವ ಸಂದರ್ಭದಲ್ಲಿ ದಿವ್ಯಾ ಮಿತ್ತಲ್ ಅವರ ರಾಜಕೀಯ ಪ್ರವೇಶದ ಘೋಷಣೆ ಮಹತ್ವ ಪಡೆದುಕೊಂಡಿದೆ. 'ಉತ್ತರ ಪ್ರದೇಶ ನನ್ನ ಕರ್ಮಭೂಮಿ. ನನ್ನ ರಾಜಕೀಯ ಪಯಣದ ಆರಂಭವೂ ಇಲ್ಲಿಂದಲೇ ಆಗಲಿದೆ' ಎಂದು ಅವರು ಸ್ಪಷ್ಟಪಡಿಸಿದ್ದಾರೆ.

2013ನೇ ಬ್ಯಾಚ್ನ IAS ಅಧಿಕಾರಿಯಾಗಿರುವ ದಿವ್ಯಾ ಮಿತ್ತಲ್ 13 ವರ್ಷಗಳ ಕಾಲ ಆಡಳಿತಾತ್ಮಕ ಸೇವೆ ಸಲ್ಲಿಸಿದ್ದಾರೆ. ಅವರ ರಾಜೀನಾಮೆಯನ್ನು ಈ ತಿಂಗಳು ಅಂಗೀಕರಿಸಲಾಗಿತ್ತು. ಮಿರ್ಝಾಪುರ್ ಮತ್ತು ಡಿಯೋರಿಯಾ ಸೇರಿದಂತೆ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಯಾಗಿ ಅವರು ಕಾರ್ಯನಿರ್ವಹಿಸಿದ್ದರು.

ಮಿರ್ಝಾಪುರ್ ನ ದೂರದ ಗ್ರಾಮಗಳಿಗೆ ಕೊಳವೆ ಮೂಲಕ ಕುಡಿಯುವ ನೀರು ಒದಗಿಸುವಲ್ಲಿ ಅವರು ಕೈಗೊಂಡ ಕ್ರಮಗಳು ಗಮನ ಸೆಳೆದಿದ್ದವು. ಈ ಹಿನ್ನೆಲೆಯಲ್ಲಿ ಅವರು ಜನಾನುರಾಗಿ ಅಧಿಕಾರಿಯಾಗಿ ಪ್ರಶಂಸೆಗೆ ಪಾತ್ರರಾಗಿದ್ದರು.

IAS ಸೇವೆಗೆ ರಾಜೀನಾಮೆ ನೀಡಿದ ಬಳಿಕ ರಾಜಕೀಯ ಪ್ರವೇಶದ ಕುರಿತು ಇದ್ದ ಊಹಾಪೋಹಗಳಿಗೆ ಮಂಗಳವಾರ ತೆರೆ ಎಳೆದಿರುವ ದಿವ್ಯಾ ಮಿತ್ತಲ್, ಯಾವುದೇ ಪಕ್ಷದೊಂದಿಗೆ ಗುರುತಿಸಿಕೊಳ್ಳದೆ ಜನರೊಂದಿಗೆ ಕೆಲಸ ಮಾಡುವ ಮೂಲಕ ತಮ್ಮ ರಾಜಕೀಯ ಪಯಣ ಆರಂಭಿಸುವುದಾಗಿ ಘೋಷಿಸಿದ್ದಾರೆ.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries