HEALTH TIPS

11ನೇ ತರಗತಿ ವಿದ್ಯಾರ್ಥಿಯಿಂದ ಸಹಪಾಠಿ ಮೇಲೆ ಆಟಿಕೆ ಬಂದೂಕಿನಿಂದ ಮನಸೋಇಚ್ಛೆ ಹಲ್ಲೆ

ಜೈಪುರ: ರಾಜಸ್ಥಾನದ ಕೋಟಾದ 'ಅಲೆನ್' ಕೋಚಿಂಗ್ ಕೇಂದ್ರದಲ್ಲಿ ಉತ್ತರ ಪ್ರದೇಶದ ಜೆಇಇ ಆಕಾಂಕ್ಷಿಯೊಬ್ಬ, ಬಿಹಾರ ಮೂಲದ 16 ವರ್ಷದ ಸಹಪಾಠಿಯ ಮೇಲೆ ಆಟಿಕೆ ಬಂದೂಕಿನಿಂದ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾನೆ. 


ಹಲ್ಲೆಯಿಂದಾಗಿ ವಿದ್ಯಾರ್ಥಿಯ ತಲೆ, ಕೈ ಸೇರಿ ಹಲವೆಡೆ ಗಂಭೀರ ಗಾಯಗಳಾಗಿವೆ. 

ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಶುಕ್ರವಾರ ಸಂಜೆ ಜವಾಹರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹಲ್ಲೆ ನಡೆದಾಗ ಕೋಚಿಂಗ್ ಕೇಂದ್ರದಲ್ಲಿದ್ದ ಇತರ ವಿದ್ಯಾರ್ಥಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಬಳಿಕ ಸಿಬ್ಬಂದಿ ಮಧ್ಯಪ್ರವೇಶಿಸಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ.

ಇಬ್ಬರೂ ವಿದ್ಯಾರ್ಥಿಗಳು 16 ವರ್ಷ ವಯಸ್ಸಿನವರಾಗಿದ್ದಾರೆ. ಒಂದೇ ತರಗತಿಯಲ್ಲಿ ಓದುತ್ತಿದ್ದು, ಜೆಇಇ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಮುಕೇಶ್ ಮೀನಾ ತಿಳಿಸಿದ್ದಾರೆ.

ಗಾಯಗೊಂಡ ವಿದ್ಯಾರ್ಥಿಯನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಅವರು ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿಗಳು ಚಿಕ್ಕ ವಯಸ್ಸಿನವರಾಗಿರುವುದರಿಂದ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ಆಗುವುದಿಲ್ಲ. ಕಾನೂನಿನ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೀನಾ ಹೇಳಿದ್ದಾರೆ.

ಹಲ್ಲೆಗೊಳಗಾದ ವಿದ್ಯಾರ್ಥಿಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.


📱 Allen Institute, Sabal Campus, Kota, Rajasthan There are multiple fake Claims that a Gun shot was hit to a student. Police confirmed it was a physical assault where one student (from UP) struck another (from Bihar) on the head with the butt of a toy airsoft gun during a Show more






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries