HEALTH TIPS

ಭದ್ರತಾ ಸಿಬ್ಬಂದಿಯೊಂದಿಗೆ ಘರ್ಷಣೆ ಆರೋಪ: ಅಂಬೇಡ್ಕರ್ ವಿ.ವಿ.ಯ 11 ವಿದ್ಯಾರ್ಥಿಗಳ ಅಮಾನತು

ನವದೆಹಲಿ: ದಿಲ್ಲಿಯ ಅಂಬೇಡ್ಕರ್ ವಿಶ್ವವಿದ್ಯಾನಿಲಯದ ಕಾಶ್ಮೀರಿ ಗೇಟ್ ಕ್ಯಾಂಪಸ್‌ನಲ್ಲಿ ಮಂಗಳವಾರ ನಡೆದ ಪ್ರತಿಭಟನೆ ವೇಳೆ ಭದ್ರತಾ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆಸಿದ್ದಾರೆ ಎಂಬ ಆರೋಪದಲ್ಲಿ ವಿಶ್ವವಿದ್ಯಾನಿಲಯ 11 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದೆ ಎಂದು ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ತಿಳಿಸಿದ್ದಾರೆ.


ವಿದ್ಯಾರ್ಥಿಗಳು ಭದ್ರತಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಅಲ್ಲದೆ, ಕ್ಯಾಂಪಸ್‌ನ ಗೇಟ್ ಅನ್ನು ಮುರಿಯಲು ಪ್ರಯತ್ನಿಸಿದ್ದಾರೆ ಎಂದು ಬುಧವಾರ ಹೊರಡಿಸಿದ ಆದೇಶದಲ್ಲಿ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ಆರೋಪಿಸಿದೆ.

ವಿಶ್ವವಿದ್ಯಾನಿಲಯದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ ನೇತೃತ್ವದ ವಿದ್ಯಾರ್ಥಿಗಳ ಒಕ್ಕೂಟ ನಡೆಸುತ್ತಿದ್ದ 16 ದಿನಗಳ ಧರಣಿಯ ಭಾಗವಾಗಿ, ಕ್ಯಾಂಪಸ್‌ನ 'ವಾಲ್ ಆಫ್ ಡೆಮಾಕ್ರಸಿ'ಯಲ್ಲಿ ಆನಂದ್ ಪಟವರ್ಧನ್ ಅವರ 'ಜೈ ಭೀಮ್ ಕಾಮ್ರೆಡ್' ಸಾಕ್ಷ್ಯಚಿತ್ರದ ಪ್ರದರ್ಶನದ ಮುನ್ನ ಈ ಘಟನೆ ನಡೆದಿದೆ.

ಕ್ಯಾಂಪಸ್‌ನಲ್ಲಿ ಸಭೆ, ಪ್ರತಿಭಟನೆ, ಮೆರವಣಿ ಮತ್ತು ಇತರ ಸಾರ್ವಜನಿಕ ಸಭೆಗಳನ್ನು ಆಯೋಜಿಸುವ ಮುನ್ನ ನಾಲ್ಕು ದಿನಗಳ ಮುಂಚಿತವಾಗಿ ಸೂಚನೆ ನೀಡುವುದನ್ನು ಕಡ್ಡಾಯಗೊಳಿಸಿ ಜುಲೈ 31ರಂದು ವಿಶ್ವವಿದ್ಯಾನಿಲಯ ಹೊರಡಿಸಿರುವ ಸುತ್ತೋಲೆ ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಕ್ಯಾಂಪಸ್‌ನಲ್ಲಿರುವ ಕಬ್ಬಿಣದ ಗೇಟ್‌ಗಳು ಹಾಗೂ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಬೇಕು. ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯತಿ ನೀಡಬೇಕು ಮತ್ತು ಅಧ್ಯಾಪಕರ ನೇಮಕಾತಿಯನ್ನು ಪೂರ್ಣಗೊಳಿಸಬೇಕು ಎಂಬ ಬೇಡಿಕೆಯನ್ನು ಅವರು ಮುಂದಿರಿಸಿದ್ದಾರೆ.

ಮಂಗಳವಾರ ಸಾಕ್ಷ್ಯಚಿತ್ರ ಪದರ್ಶನಕ್ಕೂ ಮುನ್ನ, ಭದ್ರತಾ ಸಿಬ್ಬಂದಿ ಸಾಕ್ಷ್ಯ ಚಿತ್ರದ ಪೋಸ್ಟರ್‌ಗಳನ್ನು ಹರಿದು ಹಾಕಿದ್ದಾರೆ, ಸಂಜೆ 6 ಗಂಟೆ ಸುಮಾರಿಗೆ ಕ್ಯಾಂಪಸ್‌ನಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ ಮತ್ತು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಇದರಿಂದ ಕೆಲವು ವಿದ್ಯಾರ್ಥಿನಿಯರ ಬಟ್ಟೆಗಳು ಹರಿದು ಹೋಗಿವೆ ಎಂದು ಎಐಎಸ್‌ಐ ಆರೋಪಿಸಿದೆ.

ಆದರೆ, ಪ್ರತಿಭಟನಕಾರ ವಿದ್ಯಾರ್ಥಿಗಳು ಕ್ಯಾಂಪಸ್‌ನ ಆಸ್ತಿಪಾಸ್ತಿಗೆ ಹಾನಿ ಉಂಟು ಮಾಡಿದ್ದಾರೆ ಮತ್ತು ಭದ್ರತಾ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆಸಿದ್ದಾರೆ ಎಂದು ವಿಶ್ವವಿದ್ಯಾನಿಲಯ ವಾದಿಸಿದೆ. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries